ಚಿಕ್ಕಮಗಳೂರು

ಹಂತ ಹಂತವಾಗಿ ರಸ್ತೆ ಡಾಂಬರೀಕರಣ: ದತ್ತ

Published On :

ಕಡೂರು: ತಾಲೂಕಿನ ಬೀರನಹಳ್ಳಿಯಲ್ಲಿ ವಿದ್ಯುತ್ ಅವಘಡಕ್ಕೆ ತುತ್ತಾಗಿ ಸುಟ್ಟು ಹೋಗಿದ್ದ ಮನೆಗೆ ಶಾಸಕ ವೈ. ಎಸ್.ವಿ. ದತ್ತ ಭೇಟಿ ನೀಡಿ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡುವ ಮೂಲಕ ಸಾಂತ್ವನ ಹೇಳಿದರು.
ಪರಿಹಾರ ನೀಡಿ ಮಾತನಾಡಿದ ಅವರು, ತಾಲೂಕು ಆಡಳಿತದ ಮೂಲಕವೂ ಯಾವ ಯಾವ ಪರಿಹಾರ ಲಭ್ಯವಾಗುತ್ತದೋ ಅದನ್ನು ಪ್ರಾಮಾಣಿವಾಗಿ ಕೊಡಿಸುವುದಾಗಿ ಭರವಸೆ ನೀಡಿದರು.
ಮನವಿ: ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಪರವಾಗಿ ವಕೀಲ ಅನಿಲ ಕುಮಾರ್ ಹಾಗೂ ಬಸವರಾಜನಾಯ್ಕ ಮಾತನಾಡಿ, ಗ್ರಾಮದೊಳಗಿರುವ ವಿದ್ಯುತ್ ಪರಿವರ್ತಕವನ್ನು ಊರ ಹೊರಗೆ ಸ್ಥಳಾಂತರಿಸುವಂತೆ ಮತ್ತು ಹಳೆಯ ವಿದ್ಯುತ್ ತಂತಿ ಲೈನುಗಳನ್ನು ಬದಲಾಯಿಸಿವಂತೆ ಹಾಗೂ ಗ್ರಾಮಕ್ಕೆ ರಸ್ತೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿದರು.
ಪ್ರಸ್ತಾವನೆ ಸಲ್ಲಿಕೆ: ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ದತ್ತ, ಈಗಾಗಾಲೇ ತಾಲೂಕಿನ ಬಹುತೇಕ ಗ್ರಾಮಾಂತರ ರಸ್ತೆಗಳನ್ನು ಡಾಂಬರೀಕರಣ ಮಾಡಲು ಹಾಗೂ ದುರಸ್ತಿಗೊಳಿಸಲು ತಾವು ವಿವಿಧ ಶೀರ್ಷಿಕೆಗಳ ಅಡಿ ಬರುವ ಎಲ್ಲ ರಸ್ತೆಗಳ ಪಟ್ಟಿಯನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಹಂತ ಹಂತವಾಗಿ ರಸ್ತೆ ಅಭಿವೃದ್ಧಿ ಹಾಗೂ  ಡಾಂಬರೀಕರಣ ನಡೆಯಲಿದೆ ಎಂದು ಭರವಸೆ ನೀಡಿದರು.
ವಿದ್ಯುತ್ ಟ್ರಾನ್ಸ್ಫಾರ್ಮ್ ಬದಲಾಯಿಸಲು ತಾವು ಮೆಸ್ಕಾಂ ಇಲಾಖೆ ಎಂಜಿನಿಯರ್ ಜೊತೆ ಮಾತನಾಡುವುದಾಗಿ ತಿಳಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಂ. ಮಹೇಶ್ವರಪ್ಪ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಮಂಜುನಾಥ ಪ್ರಸನ್ನ, ಜಯಣ್ಣ, ಗೋವಿಂದಸ್ವಾಮಿ, ವೇಣುಗೋಪಾಲ್, ಗೋವಿಂದನಾಯ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.