10 ಕೊಠಡಿ ನಿರ್ಮಾಣಕ್ಕೆ 88 ಲಕ್ಷ: ಸುಧಾಕರ್
ಕ.ಪ್ರ.ವಾರ್ತೆ ಹಿರಿಯೂರು ನ.16
ಕೇಂದ್ರ ಸರ್ಕಾರದ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಉನ್ನತೀಕರಗೊಂಡಿರುವ ಫ್ರೌಢಶಾಲೆಯ ನೂತನ ಹತ್ತು ಕೊಠಡಿಗಳ ನಿರ್ಮಾಣಕ್ಕೆ ರು. 88 ಲಕ್ಷ ನೀಡಲಾಗಿದೆ ಎಂದು ಶಾಸಕ ಡಿ. ಸುಧಾಕರ್ ಹೇಳಿದರು.
ತಾಲೂಕಿನ ಕರಿಯಾಲ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕೊಠಡಿ ನಿರ್ಮಾಣ ಕಾಮಗಾರಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕರಿಯಾಲ ತಾಲೂಕಿನ ಗಡಿಗ್ರಾಮಗಳಲ್ಲೊಂದಾಗಿದ್ದು, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಉನ್ನತೀಕರಣಗೊಳಿಸಲಾಗಿದೆ ಎಂದರು.
ಹಣ ಮಂಜೂರು: ಆದರೆ, ಪ್ರೌಢಶಾಲೆಯಾಗಿ ಪರಿವರ್ತನೆಗೊಂಡ ಬಳಿಕ ಕೊಠಡಿಗಳ ಸಮಸ್ಯೆ ಎದುರಾಗಿದ್ದು ತಿಳಿದು ಬಂದ ಹಿನ್ನೆಲೆಯಲ್ಲಿ ನೂತನ ಕೊಠಡಿ ನಿರ್ಮಾಣಕ್ಕೆ ಹಣ ಮಂಜೂರು ಮಾಡಲಾಗಿದೆ ಎಂದವರು ಹೇಳಿದರು.
ಶಿಕ್ಷಣ ಪ್ರತಿಯೊಬ್ಬರೂ ಪಡೆದುಕೊಳ್ಳಲೇಬೇಕಾದ ಮೂಲ ಹಕ್ಕಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ತಾಲೂಕಿನಲ್ಲಿ ಶೈಕ್ಷಣಿಕ ರಂಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ವ್ಯಯಿಸಲಾಗಿದೆ. ಕೊಠಡಿ ಕೊರತೆ, ಮೂಲ ಸೌಕರ್ಯ ಅಭಿವೃದ್ಧಿ ಅಗತ್ಯತೆ ಮನಗಂಡು ಆದ್ಯತಾನುಸಾರ ಎಲ್ಲಾ ಹಳ್ಳಿ, ಪಟ್ಟಣಗಳ ಶಾಲೆಗಳಿಗೂ ಅನುದಾನ ನೀಡಲಾಗಿದೆ ಎಂದರು.
ಭೂಮಿ ಮಂದೂರಿಗೆ ಕ್ರಮ: ಮಂದಿನ ದಿನಗಳಲ್ಲಿ ಶಾಲೆಗೆ ರಸ್ತೆ, ಕಾಂಪೌಂಡ್ ನಿರ್ಮಾಣ, ಆಟದ ಮೈದಾನದ ವಿಚಾರವಾಗಿ 5 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಿ.ವಿ. ಮಾಧವ ಮಾತನಾಡಿ, ಉಳಿದ ರಂಗಗಳಿಗಿಂತ ಕುಡಿಯುವ ನೀರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿ ಶಾಸಕರು ಕೈಗೊಂಡ ಅಭಿವೃದ್ಧಿಗೆ ಕಾರಣಕ್ಕೆ ಎರಡನೇ ಬಾರಿ ಜನರು ಕೈಹಿಡಿಯಲು ಸಾಧ್ಯವಾಯಿತು ಎಂದರು. ಬಿಇಒ ರಾಮಯ್ಯ, ತಾಪಂ ಸದಸ್ಯೆ ಪುಷ್ಪಾ ಮಂಜುನಾಥ್, ಗ್ರಾಪಂ ಅಧ್ಯಕ್ಷ ತಿಮ್ಮಣ್ಣ, ಗಂಗಾಧರ್, ನಾಗೇಂದ್ರ ನಾಯ್ಕ್ ಇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

