ಇಂದು ಬ್ರೈನ್ ಓ ಬ್ರೈನ್ ಕೇಂದ್ರ ಉದ್ಘಾಟನೆ
ಚಿಕ್ಕಮಗಳೂರು: ನಗರದ ಬಸವನಹಳ್ಳಿಯ ಒಂದನೇ ತಿರುವಿನಲ್ಲಿರುವ ಶಶಿ ಸದನದಲ್ಲಿ ತೆರೆಯಲಾಗಿರುವ ಬ್ರೈನ್ ಓ ಬ್ರೈನ್ ಕೇಂದ್ರವನ್ನು ಕಂಪನಿ ನಿರ್ದೇಶಕ ಎಂ. ರಾಮಕೃಷ್ಣನ್ ಉದ್ಘಾಟಿಸಲಿದ್ದಾರೆ.
ಕೇಂದ್ರದ ಉದ್ಘಾಟನೆಯ ಅಂಗವಾಗಿ ನಗರದ ಪ್ಲಾಂಟರ್ಸ್ ಕೋರ್ಟ್ ಸಭಾಂಗಣದಲ್ಲಿ ಭಾನುವಾರ ಮಧ್ಯಾಹ್ನ 3.30ಕ್ಕೆ ನೇರ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಆರ್. ಪ್ರತಿಭಾ ತಿಳಿಸಿದ್ದಾರೆ.
ಜಗತ್ತಿನ 21 ದೇಶಗಳಲ್ಲಿ ಬ್ರೈನ್ ಓ ಬ್ರೈನ್ ಶಾಖೆಗಳಿದ್ದು, ಭಾರತ ದೇಶದಲ್ಲಿ ಮೊಟ್ಟ ಮೊದಲ ಬಾರಿ 2003ರಲ್ಲಿ ಈ ಸಂಸ್ಥೆ ಚೆನ್ನೈನಲ್ಲಿ ಸ್ಥಾಪನೆಗೊಂಡಿದ್ದು, ಬೆಂಗಳೂರು ನಗರದಲ್ಲಿ 35 ಶಾಖೆಗಳನ್ನು ಹೊಂದಿದೆ. ಇನ್ನುಳಿದಂತೆ ರಾಯಚೂರು, ಧಾರವಾಡ, ಸಿಗಂದೂರು, ಕೊಡಗು ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಈ ವರೆಗೆ 25000 ಮಕ್ಕಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಮಕ್ಕಳ ನಡುವೆ ಗುಂಪು ಚರ್ಚೆ, ವ್ಯಕ್ತಿತ್ವ ವಿಕಸನ, ಭಾಷಾ ಕೌಶಲ್ಯ, ಏಕಾಗ್ರತೆ ಮತ್ತು ನೆನಪಿನ ಶಕ್ತಿ ವೃದ್ಧಿಸುವುದುಹೀಗೆ ಹಲವಾರು ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

