ಸರ್ವಶಿಕ್ಷಣ ಅಭಿಯಾನ ಶಿಕ್ಷಣಕ್ಕೆ ಪೂರಕ
ನರಸಿಂಹರಾಜಪುರ: ಇತ್ತೀಚಿನ ವರ್ಷಗಳಲ್ಲಿ ಸರ್ವಶಿಕ್ಷಣ ಅಭಿಯಾನದಿಂದಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅತಿ ಹೆಚ್ಚು ಅನುದಾನ ಬರುತ್ತಿದ್ದು, ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಎಂದು ಕಡಹಿನಬೈಲು ಗ್ರಾಪಂ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.
ಅವರು ಇತ್ತೀಚಿಗೆ ಶೆಟ್ಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶೆಟ್ಟಿಕೊಪ್ಪ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯೋಪಾಧ್ಯಾಯರಿಗೆ ಏರ್ಪಡಿಸಿದ್ದ 2 ದಿನಗಳ ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತರಬೇತಿ ಅಗತ್ಯ: ಶಾಲೆಗಳ ಅಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರ ಪಾತ್ರವೂ ಅತಿ ಮುಖ್ಯವಾಗಿದ್ದು, ಹೊಸದಾಗಿ ಆಯ್ಕೆಯಾದ ಸದಸ್ಯರಿಗೆ ಮಾಹಿತಿ ಕೊರತೆ ಇರುವುದರಿಂದ ತರಬೇತಿ ಅತಿ ಅಗತ್ಯ ಎಂದು ಅವರು ತಿಳಿಸಿದರು.
ಶೆಟ್ಟಿಕೊಪ್ಪ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಉದಯಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯ ಅಭಿವೃದ್ಧಿಗೆ ಪೋಷಕರು, ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ. ಸದಸ್ಯರು ಹೆಚ್ಚಿನ ಜವಬ್ದಾರಿ ಹೊರಬೇಕಾಗಿದೆ. ತರಬೇತಿ ಪಡೆದುಕೊಡಂಡವರು ಮುಂದಿನ ದಿನಗಳಲ್ಲಿ ಶಾಲೆ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು. ಕಡಹಿನಬೈಲು ಗ್ರಾಪಂ ಸದಸ್ಯ ಗ್ರೇಸಿ ಬಾಬು, ಮೇರಿ, ಅನಿತಾ ನಾಗರಾಜ್, ಮಳಲಿ ಶ್ರೀನಿವಾಸ್, ಸಿ.ಆರ್.ಪಿ.ಯ ಮಧುಕರ ವರ್ದನ, ಸಂಪನ್ಮೂಲ ವ್ಯಕ್ತಿ ಬಿ.ಟಿ. ಪ್ರಕಾಶ್, ಶಾಲಾ ಮುಖ್ಯೋಪಾಧ್ಯಾಯಿನಿ ಪುಟ್ಟಮ್ಮ ಉಪಸ್ಥಿತರಿದ್ದರು. ಮಧುಕರ ವರ್ದನ ಸ್ವಾಗತಿಸಿದರು. ತಿಮ್ಮೇಶ್ ವಂದಿಸಿದರು. ಶಾಲಾ ಮುಖ್ಯೋಪಾಧ್ಯರು 2 ದಿನಗಳ ತರಬೇತಿಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

