ವೈಚಾರಿಕ ವಚನ ಸಾಹಿತ್ಯ ಎಲ್ಲ ಕಾಲಕ್ಕೂ ಪ್ರಸ್ತುತ: ಮಹೇಶ್
ಚಿಕ್ಕಮಗಳೂರು: ವೈಜ್ಞಾನಿಕ ಮತ್ತು ವೈಚಾರಿಕ ವಚನ ಸಾಹಿತ್ಯ ಎಲ್ಲಾ ಕಾಲದಲ್ಲೂ ಪ್ರಸ್ತುತ ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಅಂಗವಾಗಿ ನಗರದ ಲಾಲ್ ಬಹುದ್ದೂರ್ ಶಾಸ್ತ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ ಮತ್ತು ಅಕ್ಕಮಹಾದೇವಿಯ ವಿಷಯ ಕುರಿತು ಮಾತನಾಡಿದರು.
900 ವರ್ಷಗಳು ಗತಿಸಿದ್ದರೂ ವಚನ ಸಾಹಿತ್ಯ ಗಟ್ಟಿಯಾಗಿ ನಿಂತಿದ್ದು, ಅಂತಃಸತ್ವವಿರುವ ಜಾತಿ ಪದ್ಧತಿಯನ್ನು ದಿಕ್ಕರಿಸಿದ ವಚನ ಸಾಹಿತ್ಯಕ್ಕೆ ವೈಜ್ಞಾನಿಕ ಮತ್ತು ವೈಚಾರಿಕ ನೆಲೆಗಟ್ಟಿದೆ.
ತುಳಿತಕ್ಕೆ ಒಳಗಾದ ಕಟ್ಟಕಡೆಯ ಮನುಷ್ಯನಿಗೂ ತಲುಪುವುದು. ವಚನ ಸಾಹಿತ್ಯ 12ನೇ ಶತಮಾನದಲ್ಲೇ ಮಹಿಳಾ ಸಮಾನತೆಗೆ ಒತ್ತು ಕೊಟ್ಟಿದ್ದು, 38 ಜನ ಮಹಿಳಾ ಬರಹಗಾರ್ತಿಯರು ಬಸವಣ್ಣನವರ ಅನುಭವ ಮಂಟಪದಲ್ಲಿ ಅಗ್ರಪಂಕ್ತಿಯಲ್ಲಿದ್ದ ಅಕ್ಕಮಹಾದೇವಿ ತನ್ನ ಬಾಲ್ಯದಿಂದಲೂ ಆಧ್ಯಾತ್ಮಿಕ ಸೆಳೆದಕ್ಕೊಳಗಳಾಗಿದ್ದು ಸಾಕ್ಷತ್ ಚೆನ್ನಮಲ್ಲಿಕಾರ್ಜುನನೇ ತನ್ನ ಪತಿಯೆಂದು ಬಸವಣ್ಣನ ಮಹಾಮಂಟಪವನ್ನು ದಿಗಂಬರಿಯಾಗಿ ಪ್ರವೇಶಿಸಿದ ಗಟ್ಟಿತನದ ಧೀರೋದ್ಧರ ಮಹಿಳೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಲಿತ ಮುಖಂಡ ಕೆ.ಟಿ. ರಾಧಾಕೃಷ್ಣ, ಶಾದಿ ಭಾಗ್ಯಕ್ಕೆ ಕನ್ನಡದಲ್ಲಿ ಪದ ಇಲ್ಲಾ. ಇದು ಸರ್ಕಾರದ ಇಚ್ಛಾಶಕ್ತಿಯ ಕೊರತೆ ಹಾಗೂ ಪಠ್ಯ ಪುಸ್ತಕಗಳ ರಚನೆ ಮತ್ತು ಇಂದಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ ಎಂದು ಹರಿಹಾಯ್ದರು.
ಜಿಲ್ಲಾ ಕಸಾಪ ಅಧ್ಯಕ್ಷ ನಾ.ಸು. ಶಿವಸ್ವಾಮಿಯವರು ತಮ್ಮ ಆಶಯ ಭಾಷಣದಲ್ಲಿ 15 ದಿನಗಳ ಯಶಸ್ವಿ ಕಾರ್ಯಾಚರಣೆಯನ್ನು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಂಶುಪಾಲ ಶೇಖರಪ್ಪನವರು ಕನ್ನಡ ಸಾಹಿತ್ಯ ಪರಿಷತ್ತಿನ ನಿರಂತರ ಚಟುವಟಿಕೆ ಬಗ್ಗೆ ಅಭಿನಂದಿಸುತ್ತಾ ಮಕ್ಕಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಕಾಳಜಿಯಿರಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

