ಚಿಕ್ಕಮಗಳೂರು

'ಸಹಕಾರಿ ಸಂಘಗಳ ಅಭಿವೃದ್ಧಿಯಾಗಲಿ'

Published On :

ಬಾಳೆಹೊನ್ನೂರು: ಸಹಕಾರಿ ಸಂಘಗಳು ಸಮರ್ಥವಾಗಿ ಕಾರ್ಯನಿರ್ವಹಿಸಿ ಅಭಿವೃದ್ಧಿ ಹೊಂದಬೇಕು ಎಂದು ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಸುಧಾಕರ್ ಹೇಳಿದ್ದಾರೆ.
ಇಲ್ಲಿನ ಸಹಕಾರ ಸಂಘದ ಆವರಣದಲ್ಲಿ 60ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರಿ ಆಡಳಿತ ನಾಯಕತ್ವ ಮತ್ತು ಸುಧಾರಣೆಗಳು ಉದ್ದೇಶದಡಿಯಲ್ಲಿ ಗುರುವಾರ ಪ್ರಾರಂಭವಾದ ಸಹಕಾರಿ ಸಪ್ತಾಹದ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
20ರ ವರೆಗೆ ನಡೆಯುವ ಸಹಕಾರಿ ಸಪ್ತಾಹವು ರಾಜ್ಯದ ಎಲ್ಲಾ ಸಹಕಾರಿ ಬಂಧುಗಳ ಅತ್ಮೀಯ ಸಮ್ಮಿಲನಕ್ಕೆ  ಸಾಕ್ಷಿಯಾಗಲಿದ್ದು, ಸಹಕಾರಿ ಮೌಲ್ಯಗಳನ್ನು ಎತ್ತಿಹಿಡಿಯಲಿದೆ ಎಂದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕೆ.ಟಿ. ವೆಂಕಟೇಶ್ ಮಾತನಾಡಿದರು. ಕೆ.ಸಿ. ವೆಂಕಟೇಶ್, ಕೆ.ಕೆ. ವೆಂಕಟೇಶ್, ಪಾರ್ವತಮ್ಮ, ಕೆ.ಟಿ. ನಾರಾಯಣ, ಉಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.