ಚಿಕ್ಕಮಗಳೂರು

ರೈತ ಕ್ಷೇತ್ರ ಪಾಠ ಶಾಲೆ: ಅನುಕೂಲ

Published On :

ನರಸಿಂಹರಾಜಪುರ: ಕೃಷಿ ಇಲಾಖೆಯ ರೈತ ಕ್ಷೇತ್ರ ಪಾಠ ಶಾಲೆಯಿಂದ ರೈತರಿಗೆ ಹೆಚ್ಚು ಉಪಯೋಗವಾಗುತ್ತಿದೆ ಎಂದು ಕಾನೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೇಶ್ ತಿಳಿಸಿದರು.
ಅವರು ಸೋಮವಾರ ಕೃಷಿ ಇಲಾಖೆಯ ಆಶ್ರಯದಲ್ಲಿ ಕಾನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಾವಣ ಗ್ರಾಮದ ಜನಾರ್ದನ ಎಂಬ ರೈತರ ಕೃಷಿ ಕ್ಷೇತ್ರದಲ್ಲಿ ನಡೆದ ಭೂ ಚೇತನ ಯೋಜನೆಯ ಬತ್ತದ ಬೆಳೆ ಕ್ಷೇತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದರು.
ಕೃಷಿ ಇಲಾಖೆಯ ಸಲಹೆಯಂತೆ ವೈಜ್ಞಾನಿಕ ಕೃಷಿ ಮಾಡಿದರೆ ಬತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಬಹುದು. ತಾವು ಸಹ ಕೃಷಿ ಇಲಾಖೆಯ ಮಾರ್ಗದರ್ಶನದಲ್ಲಿ ಬತ್ತದ ಬೆಳೆ ಕೃಷಿ ಮಾಡಿ ಯಶಸ್ವಿಯಾಗಿದ್ದೇನೆ ಎಂದರು.
ಕೃಷಿ ಇಲಾಖೆಯ ಆತ್ಮ ಯೋಜನೆಯ ವ್ಯವಸ್ಥಾಪಕಿ ವಾಸುಕಿ ಪ್ರಾಸ್ತಾವಿಕವಾಗಿ ಮಾತನಾಡಿ, ಭೂ ಚೇತನ ಯೋಜನೆಯ ರೈತ ಕ್ಷೇತ್ರ ಪಾಠಶಾಲೆಯ ಉದ್ದೇಶ, ಮಹತ್ವದ ಬಗ್ಗೆ ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಗೆಳೆಯರ ಬಳಗದ ಸ್ವಸಹಾಯ ಸಂಘದ ಅಧ್ಯಕ್ಷ ದಿನೇಶ್ ಮಾತನಾಡಿ, ರೈತ ಕ್ಷೇತ್ರ ಪಾಠಶಾಲೆಗೆ ದಾವಣ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದು ಇಲ್ಲಿಯ ರೈತರಿಗೆ ಸ್ಫೂರ್ತಿ ತಂದಿದೆ ಎಂದರು.
ಸಹಾಯಕ ಕೃಷಿ ಅಧಿಕಾರಿ ವಿ.ಎಸ್. ಶಿವಮೂರ್ತಿ ಮಾತನಾಡಿ, ರೈತ ಕ್ಷೇತ್ರ ಪಾಠಶಾಲೆಯ ಉದ್ದೇಶ, ರೈತ ಕ್ಷೇತ್ರದ ಅಧಿವೇಶನದಲ್ಲಿ ರೈತರಿಗೆ ನೀಡಿದ್ದ ಸಲಹೆಗಳ ಬಗ್ಗೆ ವಿವರಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.