ಚಿಕ್ಕಮಗಳೂರು

ಸುಬ್ರಮಣ್ಯಗೆ ರಾಜ್ಯ ಮಟ್ಟದ ಪ್ರಶಸ್ತಿ

Published On :

ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲೆಯ ಹಿರಿಯ ಸಹಕಾರಿ ಯಡಗೆರೆ ವೈ.ಎಸ್. ಸುಬ್ರಮಣ್ಯ ಅವರಿಗೆ ಸಂಯುಕ್ತ ಸೌಹಾರ್ದ ಸಹಕಾರಿ ನೀಡುವ ರಾಜ್ಯ ಮಟ್ಟದ ಶ್ರೇಷ್ಠ ಸಹಕಾರಿ ಪ್ರಶಸ್ತಿ ಲಭಿಸಿದೆ.
ಪ್ರಸ್ತುತ ಯಡಗೆರೆ ವೈ.ಎಸ್. ಸುಬ್ರಮಣ್ಯ ಅವರು ತಾಲೂಕಿನ ಸೀತೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ, ಕೊಪ್ಪದ ಯಡಗೆರೆ ಸೌಹಾರ್ದ ಕ್ರೆಡಿಟ್ಸ್ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮ್ಯಾಮ್ಕೋಸ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಾಳೆ ಕ್ಲಸ್ಟರ್ ಮಟ್ಟದ ಬಾಲಮೇಳ
ನರಸಿಂಹರಾಜಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಸೀತೂರು ಗ್ರಾಪಂ ಆಶ್ರಯದಲ್ಲಿ ಸೀತೂರು ಕ್ಲಸ್ಟರ್ ಮಟ್ಟದ ಬಾಲಮೇಳ ಮತ್ತು ಕಿಶೋರಿಯರ ದಿನ ಕಾರ್ಯಕ್ರಮ ನ. 19ರ ಮಂಗಳವಾರ ಕಮಲಾಪುರ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕಮಾಲಾಪುರ ಬಾಲವಿಕಾಸ ಸಲಹಾ ಸಮಿತಿ ಅಧ್ಯಕ್ಷ ಎ.ಎಸ್. ವೆಂಕಟರಮಣ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಸೀತೂರು ಗ್ರಾಪಂ ಅಧ್ಯಕ್ಷೆ ಸುನಂದ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಪಂ  ಉಪಾಧ್ಯಕ್ಷ ಬಾಬು ಪೂಜಾರಿ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭ ನಡೆಯಲಿದ್ದು, ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್ ಸಮಾರೋಪ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.