ಚಿಕ್ಕಮಗಳೂರು

ಅಂಗನವಾಡಿಗಳಿಗೆ ಸೌಕರ್ಯ ಕಲ್ಪಿಸಲು ಅನುದಾನ

Published On :

ನರಸಿಂಹರಾಜಪುರ: ಎಲ್ಲ ಅಂಗನವಾಡಿಗಳಿಗೂ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ಜಿಪಂ ಉಪಾಧ್ಯಕ್ಷೆ ಸುಜಾತ ಶಿವಲಿಂಗಪ್ಪ ಭರವಸೆ ನೀಡಿದರು.
ಮಂಗಳವಾರ ಕಮಾಲಾಪುರ ಶಾಲಾ ಆವರಣದ ಮಕ್ಕಳ ಮಂಟಪದಲ್ಲಿ ನಡೆದ ಸೀತೂರು ಕ್ಲಸ್ಟರ್ ಮಟ್ಟದ ಬಾಲಮೇಳ ಮತ್ತು ಕಿಶೋರಿಯರ ದಿನ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು, ಸಣ್ಣ ಮಕ್ಕಳು ಸಹ ಇತ್ತೀಚಿನ ದಿನಗಳಲ್ಲಿ ಮೊಬೈಲ್, ಟಿ.ವಿ. ಕಾರ್ಯಕ್ರಮಗಳಿಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ತಾಯಂದಿರು ಮಕ್ಕಳ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಮಾತನಾಡಿ, ತಾಲೂಕಿನ ಎಲ್ಲ ಅಂಗನವಾಡಿಗಳಿಗೂ ವಿದ್ಯುತ್ ಹಾಗೂ ಪ್ಯಾನ್ ನೀಡುವ ಯೋಜನೆ ರೂಪಿಸಲಾಗಿದೆ. ಈಗಾಗಲೇ ನಮ್ಮ ವ್ಯಾಪ್ತಿಯ 5 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕೆರೆಗದ್ದೆ ಅಂಗನವಾಡಿ ಕಾಂಪೌಂಡ್ ನಿರ್ಮಿಸಲು 3 ಲಕ್ಷ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಕಮಾಲಾಪುರ ಬಾಲಮೇಳ ಸಮಿತಿ ಅಧ್ಯಕ್ಷ ಎ.ಎಸ್. ವೆಂಕಟರಮಣ ವಹಿಸಿದ್ದರು. ಅತಿಥಿಗಳಾಗಿ ಸೀತೂರು ಗ್ರಾಪಂ ಸದಸ್ಯರಾದ ಕೆ.ಎಸ್. ಉಮೇಶ್, ಎಚ್.ಇ.ದಿವಾಕರ, ಅಶ್ವಿನಿ, ಎಚ್.ಎಸ್. ಜಯರಾಮ್, ಸೀತೂರು ವಿಎಸ್‌ಎಸ್‌ಎನ್ ಅಧ್ಯಕ್ಷ ವೈ.ಎಸ್. ಸುಬ್ರಮಣ್ಯ, ಗ್ರಾಪಂ ಮಾಜಿ ಅಧ್ಯಕ್ಷ ವೈ.ಎಸ್. ಗಣೇಶ್, ಸೀತೂರು ಹರಿದ್ವರ್ಣ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಎನ್.ಪಿ. ರವಿ, ಕಮಾಲಾಪುರ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೈ.ಕೆ. ಶ್ರೀನಿವಾಸ, ಮಾಜಿ ಅಧ್ಯಕ್ಷ ಎಂ.ಎಂ. ಶ್ರೀಧರ, ಶಿಕ್ಷಣ ಇಲಾಖೆಯ ಸುಖೇಶ್ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿ ಮಕ್ಕಳಿಗೆ ಹಾಗೂ ಕಿಶೋರಿಯರಿಗೆ ಬಹುಮಾನ ವಿತರಿಸಲಾಯಿತು. ಸವಿತ ಸ್ವಾಗತಿಸಿದರು. ಶಿಕ್ಷಕಿ ಮಧು ನಿರೂಪಿಸಿದರು. ಅನುಪಮ ವಂದಿಸಿದರು.
ಉದ್ಘಾಟನೆ ಕಾರ್ಯಕ್ರಮ: ಬೆಳಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಿಡಿಪಿಒ ಜ್ಯೋತಿಲಕ್ಷ್ಮಿ, ಕಳೆದ 3 ವರ್ಷಗಳಿಂದ ಬಾಲ ವಿಕಾಸ ಸಮಿತಿ ಮೂಲಕ ಬಾಲ ಮೇಳ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇವೆ. ಪುಟಾಣಿ ಮಕ್ಕಳ ಪ್ರತಿಭೆ ಹೊರ ಹಾಕಲು ಇದೊಂದು ಉತ್ತಮ ವೇದಿಕೆಯಾಗಲಿದೆ ಎಂದು ತಿಳಿಸಿದರು.
ಸೀತೂರು ಗ್ರಾಪಂ ಉಪಾಧ್ಯಕ್ಷ ಬಾಬು ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಸುನಂದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸದಸ್ಯರಾದ ರಜನಿರಮೇಶ್, ವೀಣಾ ಶ್ರೀಧರ್, ಸಿಡಿಪಿಒ ಇಲಾಖೆಯ ಮೇಲ್ವಿಚಾರಕಿ ಕಾವ್ಯಶ್ರೀ, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಉಪಸ್ಥಿತರಿದ್ದರು.
 10 ಅಂಗನವಾಡಿಯಿಂದ  ನೂರಾರು ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.