ಚಿಕ್ಕಮಗಳೂರು

ಕಣ್ಣಿನ ರಕ್ಷಣೆ ಬಗ್ಗೆ ವಿಶೇಷ ಕಾಳಜಿ ವಹಿಸಿ

Published On :

ಕ.ಪ್ರ.ವಾರ್ತೆ, ಶೃಂಗೇರಿ, ನ.17 ಪಂಚೇಂದ್ರಿಯಗಳಲ್ಲಿ ಪ್ರಮುಖವಾಗಿರುವ ಕಣ್ಣು ಮನುಷ್ಯ ದೇಹದ ಶ್ರೇಷ್ಠ ಅಂಗವಾಗಿದ್ದು, ಕಣ್ಣಿನ ರಕ್ಷಣೆ ಬಗ್ಗೆ ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.
ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶಿವಮೊಗ್ಗದ ಮಲೆನಾಡು ಕಣ್ಣಿನ ಮತ್ತು ಮಕ್ಕಳ ಆಸ್ಪತ್ರೆ.ಸರ್ಕಾರಿ ಆಸ್ಪತ್ರೆ, ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ವೃದ್ಧರವರೆಗೆ ಕಣ್ಣಿನ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿದೆ. ಆಗಾಗ ಕಣ್ಣಿನ ತಪಾಸಣೆಯನ್ನು ನಿರಂತರವಾಗಿ ಮಾಡಿಸಿಕೊಳ್ಳುತ್ತಿರಬೇಕು. ಕಣ್ಣಿನ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ  ದೃಷ್ಟಿಹೀನತೆ ಎದುರಿಸಬೇಕಾಗುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗ ಮಲೆನಾಡು ಕಣ್ಣಿನ ಮತ್ತು ಮಕ್ಕಳ ಆಸ್ಪತ್ರೆ ವೈದ್ಯ ಡಾ. ಜಾರಕಿಹೊಳಿ, ಅಂಧತ್ವ ನಿವಾರಣೆ ಮಾಡುವುದು ಇಂತಹ ಶಿಬಿರಗಳ ಮುಖ್ಯ ಉದ್ದೇಶ. ಸಾರ್ವಜನಿಕರು ಇಂತಹ ಶಿಬಿರಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು.
ರೋಟರಿ ಸಂಸ್ಥೆ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಇನ್ನರ್ ವೀಲ್ ಅಧ್ಯಕ್ಷೆ ಪೂರ್ಣಿಮಾ ಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.