ಚಿಕ್ಕಮಗಳೂರು

ಮಕ್ಕಳು ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ: ಈರಣ್ಣ

Published On :

ತರೀಕೆರೆ: ಮಕ್ಕಳೇ ನಾಳಿನ ಪ್ರಜೆಗಳಾಗಿದ್ದು, ಸನ್ಮಾರ್ಗದಲ್ಲಿ ನಡೆದು, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಪುರಸಭೆ ಸದಸ್ಯ ಈರಣ್ಣ ತಿಳಿಸಿದ್ದಾರೆ.
ಪಟ್ಟಣದ ಅರುಣೋದಯ ವಿದ್ಯಾಕೇಂದ್ರ ವತಿಯಿಂದ ಸಂಸ್ಥೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಚಾಚಾ ನೆಹರು ಮಕ್ಕಳನ್ನು ಪ್ರೀತಿಸುತ್ತಿದ್ದ ಕಾರಣ ಅವರ ಜನ್ಮದಿನವನ್ನು ಭಾರತದಾದ್ಯಂತ ಮಕ್ಕಳ ದಿನಾಚರಣೆಯನ್ನಾಗಿ ಅಚರಿಸಲಾಗುತ್ತಿದೆ ಎಂದು ಹೇಳಿದರು.
ಅರುಣೋದಯ ವಿದ್ಯಾಕೇಂದ್ರದ ಕಾರ್ಯದರ್ಶಿ ಡಾ. ಜಿ.ಎಚ್. ಶ್ರೀಹರ್ಷ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಧೈರ್ಯ ಬೆಳೆಸಿಕೊಂಡು ಮಾನಸಿಕವಾಗಿ ಸದೃಢ ಹಾಗೂ ಶಕ್ತಿಶಾಲಿ ಪ್ರಜೆಗಳಾಗಬೇಕೆಂದು ತಿಳಿಸಿದರು.
ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರೀಡೆ, ಛದ್ಮವೇಶ ಸ್ಪರ್ಧೆ ಇತ್ಯಾದಿಗಳಲ್ಲಿ ಬಹುಮಾನ ವಿಜೇತ ಮಕ್ಕಳಿಗೆ ಪ್ರಶಸ್ತಿ ನೀಡಲಾಯಿತು.
ಶಾಲೆ ಶಿಕ್ಷಕ ವೃಂದದವರು ಮಕ್ಕಳ ಮನರಂಜನೆಗಾಗಿ ನಾಟಕ ನೃತ್ಯ ಹಾಗೂ ಹಾಸ್ಯಭರಿತ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಜ್ಯೋತಿ ಲೋಕೇಶ್, ನೀಲಮ್ಮ ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.