ಚಿಕ್ಕಮಗಳೂರು

ಜಿಪಂ ಆಡಳಿತದಲ್ಲಿ ಶಾಸಕರಹಸ್ತಕ್ಷೇಪ: ಅಧ್ಯಕ್ಷರ ಆಕ್ಷೇಪ

Published On :

ಚಿಕ್ಕಮಗಳೂರು:  ಜಿಲ್ಲಾ ಪಂಚಾಯಿತಿ ಆಡಳಿತದಲ್ಲಿ ತರೀಕೆರೆ ಶಾಸಕರಾದ ಜಿ.ಹೆಚ್. ಶ್ರೀನಿವಾಸ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಆರೋಪಿಸಿದ್ದಾರೆ.
 2013-14ನೇ ಸಾಲಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಅನುದಾನವನ್ನು ಜಿಲ್ಲಾ ಪಂಚಾಯಿತಿಗೆ ಒದಗಿಸಿದೆ.
   ಸದರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ತರೀಕೆರೆ ಕ್ಷೇತ್ರದ ಶಾಸಕರಾದ ಜಿ.ಹೆಚ್. ಶ್ರೀನಿವಾಸ್ ಕುಡಿಯುವ ನೀರಿಗಾಗಿ ಒದಗಿಸಿದಂತಹ ಅನುದಾನ ಶಾಸಕರಿಗೆ ಸಂಬಂಧಿಸಿದ್ದು, ನಾನು ಹೇಳಿದಂತಹ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಬೇಕು, ಇಲ್ಲವಾದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಬಿಡುವುದಿಲ್ಲವೆಂದು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ತಾಲೂಕಲ್ಲಿ ಅಭಿವೃದ್ಧಿ ಶೂನ್ಯ: ಜಿಲ್ಲಾ ಪಂಚಾಯಿತಿಗೆ ಒದಗಿಸಿದ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲು ಶಾಸಕರು ತೊಂದರೆ ನೀಡುತ್ತಿದ್ದು, ಇದರಿಂದಾಗಿ ತರೀಕೆರೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳ ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದ್ದಾರೆ.
 ಜಿಪಂೆ ಒದಗಿಸಿರುವ ಅನುದಾನದಲ್ಲಿ ತರೀಕೆರೆ ಶಾಸಕರು ಹಸ್ತಕ್ಷೇಪವನ್ನು ಮಾಡುತ್ತಿರುವುದರಿಂದ ಜಿಲ್ಲಾ ಪಂಚಾಯಿತಿ ಸದಸ್ಯರ ಹಕ್ಕುಚ್ಯುತಿಯಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗಿದೆ. ಈ ಕುರಿತು ಜಿಲ್ಲಾ ಪಂಚಾಯಿತಿ ಸದಸ್ಯರುಗಳು ಮುಖ್ಯಮಂತ್ರಿಗಳಿಗೆ ಶಾಸಕರ ಹಸ್ತಕ್ಷೇಪವನ್ನು ನಿಲ್ಲಿಸುವಂತೆ ಸೂಕ್ತ ನಿರ್ದೇಶನ ನೀಡುವಂತೆ ವಿನಂತಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
 ತಶಾಸಕರು ಹಸ್ತಕ್ಷೇಪವನ್ನು ನಿಲ್ಲಿಸದಿದ್ದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರೆಲ್ಲರೂ ಶಾಸಕರ ಈ ಧೋರಣೆಯ ವಿರುದ್ಧ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.