ಚಿಕ್ಕಮಗಳೂರು

'ಬ್ಯಾಂಕ್‌ಗಳು ಗ್ರಾಹಕ ಸ್ನೇಹಿಯಾಗಲಿ'

Published On :

ಚಿಕ್ಕಮಗಳೂರು: ಜನ ಸ್ನೇಹಿ ಮತ್ತು ಗ್ರಾಹಕರ ಸ್ನೇಹಿಗಳಾಗಿ ಬ್ಯಾಂಕ್‌ಗಳು ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
 ನಗರದ ಬೈಪಾಸ್ ರಸ್ತೆಯ ಕಲ್ಯಾಣ ನಗರದಲ್ಲಿ ಕೆನರಾ ಬ್ಯಾಂಕಿನ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆನರಾ ಬ್ಯಾಂಕಿನಿಂದ ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದರು.
ಸೌಲಭ್ಯ ಪಡೆಯಿರಿ: ನಗರಸಭೆ ಸದಸ್ಯ ಹೆಚ್.ಡಿ. ತಮ್ಮಯ್ಯ ಮಾತನಾಡಿ, ಈ ಭಾಗದಿಂದ ಬ್ಯಾಂಕ್‌ಗೆ ಹೋಗಬೇಕಾದರೆ 4 ಕಿ.ಮೀ. ದೂರ ಹೋಗಬೇಕಾಗಿತ್ತು. ಈ ಸಮಸ್ಯೆಯನ್ನು ಕೆನರಾ ಬ್ಯಾಂಕ್ ಬಗೆಹರಿಸಿದೆ. ಸುತ್ತ-ಮುತ್ತಲ ಗ್ರಾಹಕರು ಮತ್ತು ವ್ಯಾಪಾರಸ್ಥರು ಬ್ಯಾಂಕ್‌ನ ಸೌಲಭ್ಯ ಪಡೆಯಲು ಮನವಿ ಮಾಡಿದರು.  ಶಿವಮೊಗ್ಗ ವೃತ್ತ ಕಚೇರಿಯ ಉಪ ಮಹಾ ಪ್ರಬಂಧಕರಾದ ಎಂ.ಎಂ. ಚಿನಿವಾರ್ ಮಾತನಾಡಿ, ನಮ್ಮ ಬ್ಯಾಂಕ್‌ವತಿಯಿಂದ ಗೃಹ, ವ್ಯಾಪಾರ, ಶಿಕ್ಷಣ ಸಾಲಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ನಗರದಲ್ಲಿ 24 ಗಂಟೆಯೂ ಹಣ ಕಟ್ಟಿ, ಪಡೆದುಕೊಳ್ಳುವಂತಹ ಬ್ಯಾಂಕಿನ ವ್ಯವಸ್ಥೆಯನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ ಎಂದರು.
 ಈ ಸಂದರ್ಭದಲ್ಲಿ ದೀಪಕ್ ದೊಡ್ಡಯ್ಯ, ಅಶೋಕ್, ರಘುನಾಥ್ ಉಪಸ್ಥಿತರಿದ್ದರು. ಮಮತ ಕಾರ್ಯಕ್ರಮ ನಿರೂಪಿಸಿದರು. ಶಿವರಾಂ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.