ಕನ್ನಡದಲ್ಲಿ ಪ್ರಾವಿಣ್ಯ ಸಂಪಾದಿಸಿ
ಕ.ಪ್ರ.ವಾರ್ತೆ, ತರೀಕೆರೆ, ನ. 21
ರಾಜ್ಯದ ಪ್ರತಿಯೊಬ್ಬರೂ ಮಾತೃ ಭಾಷೆ ಕನ್ನಡದಲ್ಲಿ ಪ್ರಾವಿಣ್ಯತೆ ಸಂಪಾದಿಸಬೇಕು ಎಂದು ಕಸಬಾ ಹೋಬಳಿ ಕಸಾಪ ಅಧ್ಯಕ್ಷ ಎನ್. ವೆಂಕಟೇಶ್ ತಿಳಿಸಿದರು.
ಹೋಬಳಿ ಕಸಾಪ ವತಿಯಿಂದ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯೋತ್ಸವ- ನಿತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭವಿಷ್ಯ ರೂಪಿಸಿಕೊಳ್ಳಲು ಕನ್ನಡ ಭಾಷೆ ಅಗತ್ಯವಾಗಿದೆ ಎಂದರು.
ಪುರಸಭೆ ಸದಸ್ಯೆ ಪರ್ವೀನ್ ತಾಜ್ ಸಮಾರಂಭ ಉದ್ಘಾಟಿಸಿ, ಎಲ್ಲಾ ಕಡೆ ಕನ್ನಡ ಬಳಕೆಯಾಗಬೇಕು, ವಾದ ವಿವಾದಗಳು ಕನ್ನಡದಲ್ಲಿ ನಡೆಯಬೇಕು, ಉನ್ನತ ವಿದ್ಯಾಭ್ಯಾಸ, ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿ ನಡೆಯುತ್ತಿದೆ ಇದರಂದಾಗಿ ಕನ್ನಡದಲ್ಲಿಯೂ ಹೆಚ್ಚು ಸಾಧನೆ ಮಾಡಬಹುದು ಎಂದು ತಿಳಿಸಿದರು.
ತಾಲೂಕು ಕಸಾಪ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ಮಾತನಾಡಿ, ರಾಜ್ಯೋತ್ಸವ- ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷೆ ಬೆಳವಣಿಗೆಯಲ್ಲಿ ಹೆಚ್ಚು ಒತ್ತು ಕೊಡಲಾಗುತ್ತಿದೆ. ಭಾಷೆ ಯಾರೊಬ್ಬರ ಸ್ವತ್ತೂ ಅಲ್ಲ. ಆದ್ದರಿಂದ ಮಾತೃಭಾಷೆಯೊಂದಿಗೆ ಕನ್ನಡ ಭಾಷೆಯನ್ನು ಕಲಿಯಬೇಕು ಎಂದು ತಿಳಿಸಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಿಮ್ಮಯ್ಯ, ಶಶಿಕಲಾ, ಶಾಲೆ ಮುಖ್ಯ ಶಿಕ್ಷಕಿ ನೂರುನ್ನೀಸಾ, ಪದ್ಮಾವತಿ ಮಾತನಾಡಿದರು.
--
ಸಂಸದರ ಪ್ರವಾಸ
ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಅವರು ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಚಿಕ್ಕಮಗಳೂರಿನಿಂದ ನಿರ್ಗಮಿಸಲಿದ್ದಾರೆ.
ಹುಲ್ಲಿನ ಲಾರಿಗೆ ಬೆಂಕಿ
ಮೂಡಿಗೆರೆ: ಚಿಕ್ಕಮಗಳೂರಿನಿಂದ ಮೂಡಿಗೆರೆಯ ಗಂಗನಮಕ್ಕಿ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಹುಲ್ಲನ್ನು ಸಾಗಿಸುತ್ತಿದ್ದ ಲಾರಿಯೊಂದಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದ್ದು 50 ಸಾವಿರ ನಷ್ಟ ಉಂಟಾಗಿದೆ. ಲಾರಿ ಚಾಲಕ ಹಾಗೂ ಮಾಲೀಕರು ಅಪಾಯದಿಂದ ಪಾರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

