ಚಿಕ್ಕಮಗಳೂರು

ನಾಳೆ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಕೊಪ್ಪ, ನ. 21
ಕ್ಷೇತ್ರದ ಜ್ವಲಂತ ಸಮಸ್ಯೆ ಬಗ್ಗೆ ಗಮನ ಹರಿಸದೇ ತಾತ್ಸಾರ ಮನೋಭಾವದಿಂದ ಕಾಣುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಶೃಂಗೇರಿ ಕ್ಷೇತ್ರ ಬಿಜೆಪಿ ವತಿಯಿಂದ ನ.23 ರಂದು ಕೊಪ್ಪದ ಕ್ಷೇತ್ರ ಮಟ್ಟದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಮಸ್ವಾಮಿ ತಿಳಿಸಿದರು.
ಬಿಜೆಪಿ ನಾಯಕ ಮಹಾಬಲರಾವ್ ಅವರ ಮನೆಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅಡಕೆ ಕೊಳೆರೋಗ ಸಂತ್ರಸ್ತರಿಗೆ ಇನ್ನೂ ಪೂರ್ಣ ಪ್ರಮಾಣದ ಪರಿಹಾರ  ನೀಡಿಲ್ಲ. ಆಶ್ರಯ ಮನೆ ಕಟ್ಟಲು ಮರಳು ಸಿಗುತ್ತಿಲ್ಲ. ದಿನನಿತ್ಯ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಣ್ಣ ರೈತರು ಒತ್ತುವರಿ ತೆರವುಗೊಳಿಸುವಂತೆ ನೊಟಿಸ್ ನೀಡಿ ಹಿಂಸೆ ನೀಡುತ್ತಿದ್ದಾರೆ ದೂರಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿ ನಿಲೇಶ್,ಉಪಾಧ್ಯಕ್ಷ ಮಹಬಾಲ್ ರಾವ್,ಎನ್.ಆರ್.ಪುರ ಮತ್ತು ಶೃಂಗೇರಿ ತಾಲೂಕಿನ ಅಧ್ಯಕ್ಷರಾದ ಭಾಸ್ಕರ್ ಇತರರು ಇದ್ದರು.
ಶೃಂಗೇರಿ ವರದಿ: ಕ್ಷೇತ್ರದಲ್ಲಿ ಇತ್ತೀಚಿನ ಕೆಲ ದಿನಗಳಿಂದ ರಾಜಕೀಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಆಡಳಿತ ಪಕ್ಷದವರು ಅಭಿವೃದ್ಧಿ ಕಾಮಗಾರಿ ಬಗ್ಗೆ ಚಿಂತಿಸದೆ ಅನಗತ್ಯ ವಿಷಯಗಳನ್ನೇ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಅದನ್ನು ಬಿಟ್ಟು ಕ್ಷೇತ್ರದ ಜ್ವಲಂತ ಸಮಸ್ಯೆ ಬಗ್ಗೆ ಹೋರಾಟ ನಡೆಸಲಿ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಎಸ್. ನಟೇಶ್ ತಿಳಿಸಿದರು.
ಅವರು ಪಟ್ಟಣದ ರೋಟರಿ ಭವನದಲ್ಲಿ ನಡೆದ ಪಕ್ಷದ ಮಹತ್ತರ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರದಲ್ಲಿ ಒತ್ತುವರಿ ಸಮಸ್ಯೆ, ಹಳದಿ ಎಲೆ ರೋಗ ಸಮಸ್ಯೆ, ಕುದುರೆ ಮುಖ ರಾಷ್ಟ್ರೀಯ ಉದ್ಯಾನವನ  ವ್ಯಾಪ್ತಿ ಮೂಲ ನಿವಾಸಿಗಳ ಸಮಸ್ಯೆ, ರೈತರು, ಕಾರ್ಮಿಕರು, ಜನಸಾಮಾನ್ಯರು ಸಂಕಷ್ಟಕ್ಕೊಳಗಾಗಿದ್ದಾರೆ. ಆದರೆ ಇದರ ಬಗ್ಗೆ ಚರ್ಚಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ, ಇಂತಹ ಹಲವು ಸಮಸ್ಯೆ ಬಗ್ಗೆ ಏಕೆ ಮೌನವಾಗಿದ್ದಾರೆ. ಈ ಎಲ್ಲಾ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನ. 23 ರ ಶನಿವಾರ ಕೊಪ್ಪದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು.  
ತಾಪಂ ಮಾಜಿ ಅಧ್ಯಕ್ಷ ನಯನ ಮಾತನಾಡಿದರು. ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್. ರಂಗನಾಥ್, ಜಿಪಂ ಸದಸ್ಯ ಬಿ. ಶಿವಶಂಕರ್, ಕೃಷ್ಣಮೂರ್ತಿ ಹೆಗ್ಡೆ, ಪಪಂ ಸದಸ್ಯ ಪರಾಶರ, ಬಿ.ಎನ್. ಕೃಷ್ಣ ಮೊದರಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.