ಡಿ.14ರಂದು ದತ್ತಜಯಂತಿಗೆ ಚಾಲನೆ
ಚಿಕ್ಕಮಗಳೂರು: ಬಜರಂಗದಳ ನೇತೃತ್ವದಲ್ಲಿ ಡಿ. 14 ರಿಂದ 3 ದಿನಗಳ ಕಾಲ ದತ್ತಪೀಠದಲ್ಲಿ ದತ್ತಜಯಂತಿ ಮಹೋತ್ಸವ ನಡೆಯಲಿದೆ. ದತ್ತಜಯಂತಿ ಅಂಗವಾಗಿ ಡಿ. 7 ರಂದು ಬಜರಂಗದಳದ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಲಿದ್ದಾರೆ ಎಂದು ಬಜರಂಗದಳ ರಾಜ್ಯ ಸಂಚಾಲಕ ಸೂರ್ಯನಾರಾಯಣ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು. ಡಿ. 7 ರಂದು ರಾಜ್ಯಾದ್ಯಂತ ಬಜರಂಗದಳ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಲಿದ್ದು, 10 ದಿನಗಳ ಕಾಲ ವ್ರತಾಚರಣೆ ಮಾಡಿ, 16 ರಂದು ದತ್ತಪೀಠಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು. ಡಿ. 14ರಂದು ದತ್ತಪೀಠದಲ್ಲಿ ಗಣಹೋಮ, ದುರ್ಗಾಹೋಮ, ಅನಸೂಯ ದೇವಿಯ ಪೂಜೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ.
ನಗರ ಸಂಕೀರ್ತನೆ: ಅಂದು ರಾಜ್ಯದ ವಿವಿಧೆಡೆಯಿಂದ ಭಾಗವಹಿಸುವ ಮಹಿಳೆಯರು ದತ್ತಪೀಠಕ್ಕೆ ತೆರಳುವ ಮುನ್ನ ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ 7.30ಕ್ಕೆ ಸಂಕೀರ್ತನಾ ಮೆರವಣಿಗೆ ನಡೆಸಲಿದ್ದಾರೆ. ದತ್ತಪೀಠದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದತ್ತಾತ್ರೇಯ ಪಾದುಕೆಗಳ ದರ್ಶನ ಪಡೆಯಲಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

