ರಸ್ತೆ ಅಭಿವೃದ್ಧಿಗೆ 5 ಕೋಟಿ
ಕ.ಪ್ರ.ವಾರ್ತೆ, ಬೀರೂರು, ನ. 22
ರಾಜ್ಯ ಪೌರಾಡಳಿತ ಇಲಾಖೆಯ ಸರ್ಕಾರದ ಮಹತ್ವಾಕಾಂಕ್ಷೆಯ ಸಣ್ಣ- ಪುಟ್ಟ ಹಾಗೂ ಹೋಬಳಿ ಪಟ್ಟಣ ಪುರಸಭೆಗಳ ರಸ್ತೆ ಅಭಿವೃದ್ಧಿ ಮತ್ತು ವಿವಿಧ ಯೋಜನೆಗಳ ಆಯ್ದ 74 ಪಟ್ಟಣಗಳಿಗೆ ಸರ್ಕಾರದಿಂದ ತಲಾ 5 ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ವೈಎಸ್ ವಿ ದತ್ತ ಹೇಳಿದರು.
ಪುರಸಭೆ ಅವರಣದಲ್ಲಿ ಶುದ್ಧ ಗಂಗಾ ಕುಡಿಯುವ ನೀರಿನ ಘಟಕದ ಕಾಮಗಾರಿ ಮತ್ತು ನಗರೋತ್ಥಾನ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು.
ಕ್ಷೇತ್ರದ ಸಮಸ್ಯೆ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿ ಹಾಗೂ ಚಾಲನೆ ನೀಡಿದ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ, ಅಭಿವೃದ್ಧಿ ಕಾಮಗಾರಿಗಳು ಯಾವುದೇ ಸರ್ಕಾರದ ಕಾರ್ಯಕ್ರಮಗಳಾಗಿರಬಹುದು. ಅದು ಜನಪರವಾಗಿದ್ದಾಗ ಮುಂದುವರಿಸಿಕೊಂಡು ಬಂದಲ್ಲಿ ಕಾಮಗಾರಿ ಗುಣಮಟ್ಟದಿಂದ ಕೂಡಿದಲ್ಲಿ ಜನರಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂಬುದನ್ನು ತಿಳಿಸಿದರು.
ಜಿಪಂ ಸದಸ್ಯ ಬಿ.ಪಿ. ನಾಗರಾಜ್ ಮಾತನಾಡಿ, ಶಾಸಕರು ರೈತರ ಅಭಿವೃದ್ಧಿ ಕಾಳಜಿಯಿಂದ ಕಾರ್ಯ ನಿರ್ವಹಿಸಿದ್ದು, ಈ ನಗರೋತ್ಥಾನ ಯೋಜನೆಗೆ ಬಿಡುಗಡೆಯಾಗಿರುವ ಕಾಮಗಾರಿಗೆ ಚಾಲನೆ ನೀಡುತ್ತಿರುವುದು ಬೀರೂರು ಜನರ ಸೌಭಾಗ್ಯವಾಗಿದೆ. ಪಟ್ಟಣಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ದೊರಕಿಸಲು ಮನವಿ ಮಾಡಿದರು.
ಪುರಸಭೆ ಸದಸ್ಯೆ ಸವಿತಾ ರಮೇಶ್ ಮಾತನಾಡಿ, ಬೀರೂರಿನಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ತಮ್ಮ ಜಮೀನಿನಲ್ಲಿರುವ ಬೋರ್ವೆಲ್ ನೀರನ್ನು ಪುರಸಭೆಯವರು ಉಚಿತವಾಗಿ ಸಾರ್ವಜನಿಕರ ಬಳಕೆಗೆ ಉಪಯೋಗಿಸಿಕೊಳ್ಳಬೇಕು ಎಂದರು.
ಗುತ್ತಿಗೆದಾರ ಅಬ್ದುಲ್ ರೆಹಮಾನ್, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಂ. ಮಹೇಶ್ವರಪ್ಪ, ವೃತ್ತ ನಿರೀಕ್ಷಕ ವಿಶ್ವನಾಥ್, ಕಡೂರು ಎಚ್.ಉಮೇಶ್, ಅಭಿಯಂತರ ಭಾಸ್ಕರ್, ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಇಮಾಮ್ಸಾಬ್, ಸೋಮಣ್ಣ, ವಿ.ಜಿ. ಒಡೆಯರ್, ಪುರಸಭಾ ಸದಸ್ಯರಾದ ವಸಂತ ರಮೇಶ್, ನಾಗರಾಜ್, ಐ.ಎಂ. ಬಸವರಾಜ್, ಮುಕ್ತಿಯಾರ್, ಮಾರ್ಗದ ಮಧು ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

