ಚಿಕ್ಕಮಗಳೂರು

25ರಂದು ಸ್ವಚ್ಛತಾ ಕಾರ್ಯಕ್ರಮ

Published On :

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಕಾರ್ಯಾಲಕಯ, ಶಿರವಾಸೆ, ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಸ.ಹಿ.ಪ್ರಾ.ಶಾಲೆ ಮತ್ತು ಆರೋಗ್ಯ ಕೇಂದ್ರ, ಶಿರವಾಸೆ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ಗ್ರಾಮ ಸಭೆ, ಆರೋಗ್ಯ ತಪಾಸಣೆ ಶಿಬಿರ, ಸ್ವಚ್ಛತಾ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶಿರವಾಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಇವರ ಅಧ್ಯಕ್ಷತೆಯಲ್ಲಿ ನ. 25 ರಂದು ಬೆಳಿಗ್ಗೆ 11 ಗಂಟೆಗೆ ಆರೋಗ್ಯ ತಪಾಸಣಾ ಶಿಬಿರವನ್ನು ಶಿರವಾಸೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ, ನ.30 ರಂದು ಬೆಳಿಗ್ಗೆ 11 ಗಂಟೆಗೆ ಮಕ್ಕಳ ಗ್ರಾಮ ಸಭೆಯನ್ನು ಶಿರವಾಸೆಯ ಗ್ರಾಮಸಭಾ ಆವರಣದಲ್ಲಿ ಹಾಗೂ ಮಧ್ಯಾಹ್ನ 12.30 ಕ್ಕೆ ಸ್ವಚ್ಛತಾ ಉತ್ಸವವನ್ನು ಶಿರವಾಸೆಯ ಇಂದಿರಾ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿರವಾಸೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ಸಭೆ ಮುಂದೂಡಿಕೆ
ಜಿಲ್ಲಾ ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ನ.28 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ.ಎಸ್. ರೇಖಾ ಹುಲಿಯಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದು, ನ. 28 ರಿಂದ ವಿಧಾನಸಭಾ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನ. 28 ರಂದು ಕರೆದಿದ್ದ ಸರ್ವ ಸದಸ್ಯರ ಸಭೆಯನ್ನು ನ.30 ರಂದು ಬೆಳಿಗ್ಗೆ 11.30ಕ್ಕೆ ಮುಂದೂಡಲಾಗಿದೆ ಎಂದು ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವಧಿ ವಿಸ್ತರಣೆ
ಚಿಕ್ಕಮಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮೂಲ ವಿಜ್ಞಾನದೆಡೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ವಿಜ್ಞಾನ ವಿಷಯದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುವುಮಾಡಿಕೊಡುವ ಉದ್ದೇಶದಿಂದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಶಿಷ್ಯವೇತನ ಹಾಗೂ 2013-14 ನೇ ಸಾಲಿನಲ್ಲಿ ಪ್ರೊ. ಡಿ.ಎಂ. ನಂಜುಂಡಪ್ಪ ಸಮಿತಿಯು ಗುರುತಿಸಿರುವ ರಾಜ್ಯದ 114 ಹಿಂದುಳಿದ ತಾಲೂಕುಗಳಲ್ಲಿನ ಆರ್ಥಿಕವಾಗಿ ಹಿಂದುಳಿದ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಕಾಡೆಮಿ ಎಸ್.ಡಿ.ಎಂ. ಶಿಷ್ಯವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಕಳುಹಿಸುವ ದಿನಾಂಕವನ್ನು ಡಿ. 16 ರವರೆಗೆ ವಿಸ್ತರಿಸಿದೆ. ಇದುವರೆಗೂ ವಿದ್ಯಾರ್ಥಿಗಳ ಪಟ್ಟಿಯನ್ನು ಕಳುಹಿಸಿಕೊಟ್ಟಿರದ ಕಾಲೇಜುಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳ ಪಟ್ಟಿಯನ್ನು ಕಳುಹಿಸಿಕೊಡಬಹುದಾಗಿದೆ. ನಂತರ ಬರುವ ಪಟ್ಟಿಯನ್ನು ತಿರಸ್ಕರಿಸಲಾಗುವುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.