ಚಿಕ್ಕಮಗಳೂರು

ಅದ್ಧೂರಿ ವಾರ್ಷಿಕ ಬ್ರಹ್ಮ ರಥೋತ್ಸವ

Published On :

ಚಿಕ್ಕಮಗಳೂರು: ನಗರದ ಶ್ರೀ ಕಾಮಧೇನು ಮಹಾಶಕ್ತಿ ಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ಶುಕ್ರವಾರ ವೈಭವದಿಂದ ಜರುಗಿತು. ರಥೋತ್ಸವದ ಅಂಗವಾಗಿ ಕ್ಷೇತ್ರದ ಅಧಿದೇವತೆಗಳಿಗೆ ಅಭಿಷೇಕ, ವಿಶೇಷಪೂಜೆ, ಹೋಮ, ಹವನ ನಡೆಸಲಾಯಿತು. ಮಹಾಮಂಗಳಾರತಿ ನಂತರ ಶ್ರೀ ಕಾಮಧೇನು ಗಣಪತಿ ಮತ್ತು ಶ್ರೀ ಬಾಲಸುಬ್ರಹ್ಮಣ್ಯ ದೇವರ ಉತ್ಸವಮೂರ್ತಿಗಳನ್ನು ದೇವಾಲಯದಿಂದ ಹೊರತಂದು ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಕುಪ್ಪೂರು ಗದ್ದಿಗೆ ಮಠದ ಶ್ರೀ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರು ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಮಂಗಳವಾದ್ಯ ಹಾಗೂ ನೂರಾರು ಭಕ್ತರ ನಡುವೆ ಬ್ರಹ್ಮರಥವನ್ನು ಎಳೆಯಲಾಯಿತು.
ಬ್ರಹ್ಮರಥ ಸಾಗುವ ಹಾದಿಯಲ್ಲಿ ಮನೆಗಳ ಮುಂದೆ ಸಾರಿಸಿ ರಂಗವಲ್ಲಿಯನ್ನಿಟ್ಟು ಸಿಂಗರಿಸುವುದರ ಜೊತೆಗೆ ನಾಗರೀಕರು ಉತ್ಸವಮೂರ್ತಿಗಳಿಗೆ ಪೂಜೆ ಸಲ್ಲಿಸಿದರು. ಬ್ರಹ್ಮರಥ ದೇವಾಲಯಕ್ಕೆ ಹಿಂತಿರುಗಿದ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಉಚಿತ 108 ಮಾಹಿತಿ ಶಿಬಿರ
ಶೃಂಗೇರಿ: ಪಟ್ಟಣದ ರೋಟರಿ ಭವನದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಉಚಿತ 108 ಮಾಹಿತಿ ಶಿಬಿರ ನಡೆಯಿತು. 108 ರ ಪೈಲೆಟ್ ಸಂತೋಷ್ ಮಾತನಾಡಿ, ಉಚಿತ ಆರೋಗ್ಯ ಸೇವೆಯಲ್ಲಿ 108 ರ ಸೇವೆ ಅತ್ಯಮೂಲ್ಯ ಸೇವೆಯಾಗಿದೆ. ಮನುಷ್ಯನ ತುರ್ತು ಸಂದರ್ಭದಲ್ಲಿ ಹೆಚ್ಚು ಉಪಯುಕ್ತವಾಗಿದೆ.
ವಿದ್ಯುತ್ ಅಪಘಾತ, ಹೆರಿಗೆ, ರಸ್ತೆ ಅಪಘಾತ, ರಕ್ತಸ್ರಾವ, ರಕ್ತದೊತ್ತಡ, ಮಧುಮೇಹ ಇತ್ಯಾದಿ ಸಂದರ್ಭಗಳಲ್ಲಿ ಹೆಚ್ಚು ಅಗತ್ಯವಾಗಿದೆ. ಸಾರ್ವಜನಿಕರು ಈ ಸೇವೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಇನ್ನರ್ ವ್ಹೀಲ್, ರೋಟರಿ ಸದಸ್ಯರು ಉಪಸ್ಥಿತರಿದ್ದರು. ರೋಟರಿ ಸಂಸ್ಥೆಯ ಮಹೇಶ್ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.