ಕಟ್ಟಡ ತೆರವು ಕಾರ್ಯ ಪರಿಶೀಲನೆ
ಕ.ಪ್ರ.ವಾರ್ತೆ , ಚಿಕ್ಕಮಗಳೂರು , ನ. 23
ವಿಶೇಷ ಅನುದಾನದಡಿಯಲ್ಲಿ ನಗರದ ಎಂಜಿ ರಸ್ತೆ ಹಾಗೂ ಮಾರ್ಕೆಟ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಡಿಸೆಂಬರ್ ಮೊದಲ ವಾರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ಇಲ್ಲಿನ ಮಾರ್ಕೆಟ್ ರಸ್ತೆಗೆ ಶನಿವಾರ ಭೇಟಿ ನೀಡಿದ ಶಾಸಕರು, ಕಟ್ಟಡಗಳ ತೆರವು ಕಾರ್ಯ ವೀಕ್ಷಿಸಿ, ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಗರದ ಎಂಜಿ ರಸ್ತೆ ಹಾಗೂ ಮಾರ್ಕೆಟ್ ರಸ್ತೆಗಳಿಗೆ ಕಾಂಕ್ರಿಟ್ ಹಾಕಲಾಗುವುದು. ಇದರ ಜತೆಗೆ ನೆಲದ ಒಳ ಭಾಗದಲ್ಲಿ ಕೇಬಲ್ ಅಳವಡಿಸುವುದು ಸುಸಜ್ಜಿತವಾಗಿ ಫುಟ್‌ಪಾತ್ ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಎರಡು ರಸ್ತೆಗಳಿಗೆ 20 ಕೋಟಿ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಗುತ್ತಿಗೆದಾರರ ಕೈಗೆ ಕಾರ್ಯಾದೇಶ ತಲುಪಿದ ತಕ್ಷಣವೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ಮಾರ್ಕೆಟ್ ರಸ್ತೆ ಅಗಲೀಕರಣ ಮಾಡಲಾಗುತ್ತಿದ್ದು, ಕೆಲವರು ತಮ್ಮ ಕಟ್ಟಡ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟಿದ್ದಾರೆ. ಇನ್ನು ಕೆಲವೆಡೆ ಕಟ್ಟಡಗಳ ತೆರವು ಕಾರ್ಯ ಬಾಕಿ ಇದ್ದು, ಮಾಲೀಕರು ಕೂಡಲೇ ತಮ್ಮ ಕಟ್ಟಡ ತೆರವುಗೊಳಿಸಿ ಕಾಮಗಾರಿಗೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಇಲ್ಲಿ ಉತ್ತಮ ರಸ್ತೆ ನಿರ್ಮಾಣಗೊಳ್ಳಲಿದೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪುಷ್ಪರಾಜ್, ಮುತ್ತಯ್ಯ, ಬಿಜೆಪಿ ನಗರಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

