ಕಳಪೆ ಕಾಮಗಾರಿ: ಗಾಯತ್ರಿ ಶಾಂತೇಗೌಡ ಆಕ್ಷೇಪ
ಚಿಕ್ಕಮಗಳೂರು: ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಹಿಡಿದಿರುವ ಕಳಪೆ ಗ್ರಹಣ ಇನ್ನೂ ಬಿಟ್ಟಿಲ್ಲ. ಇಂತಹ ಕಾಮಗಾರಿಗಳು ಜನರಿಗೆ ಅಷ್ಟೇ ಅಲ್ಲ, ಜನಪ್ರತಿನಿಧಿಗಳ ಗಮನವೂ ಸೆಳೆಯುತ್ತಿವೆ.
ಶನಿವಾರದಂದು ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು ನಗರದ ಕೋಟೆ ಬಡಾವಣೆಯಲ್ಲಿರುವ ಸೆಂಟ್ ಮೇರಿಸ್ ಶಾಲೆಯ ಮುಂಭಾಗದ ರಸ್ತೆಯನ್ನು ಪರಿಶೀಲಿಸಿದರು.
ಈ ರಸ್ತೆಯನ್ನು ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿದ್ದು, ರಸ್ತೆಯ ಮೇಲೆ ಬೇಕಾ ಬಿಟ್ಟಿ ಜಲ್ಲಿ ಬಿಚಾವಣೆ ಮಾಡಿ, ಜಲ್ಲಿ ಪೌಡರ್ ಹಾಕಲಾಗಿದೆ. ಅದರ ಮೇಲೆ ನೀರು ಹಾಕಬೇಕು. ಆದರೆ, ಈ ಕೆಲಸ ಆಗಿಲ್ಲ. ಸ್ಥಳೀಯರು ಈ ವಿಷಯವನ್ನು ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡರವರ ಗಮನಕ್ಕೆ ತಂದಿದ್ದರಿಂದ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ನಿವಾಸಿಗರು ಈ ಕಾಮಗಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಸಂಪೂರ್ಣ ಕಳಪೆ: ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಈ ರೀತಿಯಲ್ಲಿ ಬೀಕಾಬಿಟ್ಟಿಯಲ್ಲಿ ಖರ್ಚು ಮಾಡಬಾರದು. ಈ ರಸ್ತೆಯ ಸ್ಥಿತಿಗತಿ ನೋಡಿದರೆ 6 ತಿಂಗಳೊಳಗೆ ಸಂಪೂರ್ಣವಾಗಿ ಹಾಳಾಗಲಿದೆ ಎಂದು ಸ್ಥಳದಲ್ಲಿಯೇ ಇದ್ದ ನಗರಸಭೆಯ ಪ್ರಭಾರಿ ಪೌರಾಯುಕ್ತ ಪುರುಷೋತ್ತಮ್ ಅವರನ್ನು ಉದ್ದೇಶಿಸಿ ಹೇಳಿದರು.
ಕೋಟೆ ಬಡಾವಣೆಯಲ್ಲಿ ಒಳ ಚರಂಡಿ ಕಾಮಗಾರಿ ಸರಿಯಾಗಿ ನಡೆದಿಲ್ಲ. ಇದೀಗ ನಿರ್ಮಾಣ ಮಾಡುತ್ತಿರುವ ರಸ್ತೆಯೂ ಸಹ ಕಳಪೆ ಗುಣಮಟ್ಟದ್ದಾಗಿದೆ ಎಂದು ಗಾಯತ್ರಿ ಶಾಂತೇಗೌಡ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಈ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

