ಯುವ ನೀತಿ ಸಂಕೀರ್ಣ ಶೀಘ್ರ: ನಾಗೇಶ್
ಚಿಕ್ಕಮಗಳೂರು: ಯುವ ಜನತೆಯನ್ನು ಸ್ವಾವಲಂಬಿಗಳಾಗಿ ಮಾಡುವ ನಿಟ್ಟಿನಲ್ಲಿ ಯುವ ಸಬಲೀಕರಣ ಇಲಾಖೆ ವತಿಯಿಂದ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಸದ್ಯದಲ್ಲೇ ಯುವ ನೀತಿ ಸಂಕೀರ್ಣ ನಿರ್ಮಾಣಗೊಳ್ಳಲಿದೆ ಎಂದು ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಎಸ್.ಜಿ. ನಾಗೇಶ್ ಹೇಳಿದ್ದಾರೆ.
ನೆಹರು ಯುವ ಕೇಂದ್ರ ನಗರದ ನೈಟಿಂಗೇಲ್ ನರ್ಸಿಂಗ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೆಹರು ಯುವ ಕೇಂದ್ರಗಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಜನತೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಯುವ ನೀತಿ ಸಂಕೀರ್ಣ ಆರಂಭಿಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಅದರಂತೆ ನಗರದ ಜಿಲ್ಲಾ ಆಟದ ಮೈದಾನದಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಯುವ ನೀತಿ ಸಂಕೀರ್ಣ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ತಿಳಿಸಿದರು.
ಯುವಕರು ಮತ್ತು ಯುವತಿಯರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಷಯಗಳು, ವೃತ್ತಿ ಕೌಶಲ್ಯ ಹಾಗೂ ಉದ್ಯೋಗದ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸುವುದರ ಜೊತೆಗೆ ಅವರು ಸ್ವಾವಲಂಬಿಗಳಾಗಿ ಬದುಕಲು ಅಗತ್ಯವಾದ ಎಲ್ಲಾ ರೀತಿಯ ಸಲಹೆ ಮತ್ತು ಸೂಚನೆಯನ್ನು ನೂತನ ಯುವನೀತಿ ಸಂಕೀರ್ಣದಲ್ಲಿ ಒದಗಿಸಲಾಗುವುದು ಎಂದ ಅವರು, ಯುವಜನತೆ ಈ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ನೆಹರು ಯುವಕೇಂದ್ರದ ಸಮನ್ವಯಾಧಿಕಾರಿ ಮಂಜುನಾಥ್ ಮಾತನಾಡಿದರು. ಶಾಲೆಯ ಪ್ರಾಂಶುಪಾಲೆ ಶಶಿಕಲಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಶಿಶು ಆರೋಗ್ಯ ಅಧಿಕಾರಿ ಡಾ. ಉಮಾ ಶಂಕರ್, ಡಾ. ವರುಣ್, ನವಚೇತನ ಯುವಕ ಸಂಘದ ಕಾರ್ಯದರ್ಶಿ ಜಗದೀಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

