ಆರೋಗ್ಯ ಅರಿವು
ಅಜ್ಜಂಪುರ: ಸಮೀಪದ ಗಡೀಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹದಿಹರೆಯದವರ ಆರೋಗ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹದಿಹರೆಯದರ ದೈಹಿಕ ಬೆಳವಣಿಗೆಯಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿರುತ್ತವೆ. ಅದಕ್ಕೆ ತಕ್ಕಂತೆ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ಅಲ್ಲದೆ, ತಮ್ಮ ಆರೋಗ್ಯದ ಕುರಿತ ಸಮಸ್ಯೆಗಳನ್ನು ಪೋಷಕರಿಗೆ ತಿಳಿಸುವ ಮೂಲಕ ವೈದ್ಯರ ಬಳಿ ಹೇಳಿಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ್ ಮತ್ತು ಸದಸ್ಯರು ಮಾತನಾಡಿದರು. ಶಿಕ್ಷಕ ಪರಮೇಶ್ವರಪ್ಪ ನಿರೂಪಿಸಿದರು. ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪುಸ್ತಕ ಬಿಡುಗಡೆ
ತರೀಕೆರೆ: ಜಮಾಅತೆ ಇಸ್ಲಾಮಿ ಹಿಂದ್ ತರೀಕೆರೆ ವತಿಯಿಂದ ಶನಿವಾರ ಶಾಸಕರ ಕಾರ್ಯಾಲಯದಲ್ಲಿ ಶಾಂತಿಗಾಗಿ ಸಾಹಿತ್ಯ ಕಾರ್ಯಕ್ರಮದಲ್ಲಿ ಮಾತು ಹೇಗಿರಬೇಕು ಪುಸ್ತಕ ಬಿಡುಗಡೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್ ಅವರು ಮಾತು ಹೇಗಿರಬೇಕು ಪುಸ್ತಕ ಬಿಡುಗಡೆ ನೆರವೇರಿಸಿ ಮಾತನಾಡಿದರು. ಶಾಸಕ ಶ್ರೀನಿವಾಸ್, ಶಕುಂತಲ ನಾಗರಾಜ್, ಕುಮಾರ್, ಕೆ.ಆರ್. ದೃವಕುಮಾರ್, ಪರಶುರಾಂ, ಶೇಕ್ ಜಾವೀದ್, ನಯಾಜ್ ಹುಸೇನ್, ದೋರನಾಳು ಪರಮೇಶ್ ಹರಳಪ್ಪ, ಎಸ್. ತಿಪ್ಪೇರುದ್ರಯ್ಯ, ಸದಸ್ಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

