ಅಂಗವಿಕಲರಿಗೆ ಅಂತ್ಯೋದಯ ಪಡಿತರ ನೀಡಿ
ಚಿಕ್ಕಮಗಳೂರು: ಅಂಗವಿಕಲರಿಗೆ ಅಂತ್ಯೋದಯ ಪಡಿತರ ಚೀಟಿ ವಿತರಣೆಯೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗವಿಕಲರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ವೋದಯ ಅಂಗವಿಕಲರ ಸಂಘದ ಅಧ್ಯಕ್ಷ ಎ. ಕಿರಣ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಹೆರಿಗೆ ಆಸ್ಪತ್ರೆಯ ಆವರಣದಲ್ಲಿ ಟೀ ಅಂಗಡಿ ತೆರೆಯಲು ಅಂಗವಿಕಲರಿಗೆ ಅವಕಾಶ ನೀಡಬೇಕು. ಅಂಗವಿಕಲರಿಗೆ ನೇರ ಸಾಲ ನೀಡಬೇಕು. ಈ ಸಂಬಂಧ ಮಾಹಿತಿಯನ್ನು ನೀಡಬೇಕು. ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ನಗರಸಭೆಗಳಲ್ಲಿ ಶೇ.3 ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಅಂಗವಿಕಲರಿಗೆ ನೀಡುತ್ತಿರುವ ಪಾಸ್ನ ವ್ಯಾಪ್ತಿಯನ್ನು 100 ಕಿ.ಮೀ.ನಿಂದ 300 ಕಿ.ಮೀ.ವರೆಗೆ ವಿಸ್ತರಿಸಬೇಕು. ಸರ್ಕಾರಿ ಉದ್ಯೋಗದಲ್ಲಿ ಶೇ.3 ರಷ್ಟು ಮೀಸಲಾತಿ ನೀಡಬೇಕು. ಗ್ರಾಮ ಪಂಚಾಯ್ತಿಗಳಲ್ಲಿ ಶೇ.3 ರಷ್ಟು ಅನುದಾನವನ್ನು ಅಂಗವಿಕಲರಿಗೆ ಕಡ್ಡಾಯವಾಗಿ ಮೀಸಲಿಡಬೇಕು. ಅರ್ಹ ಅಂಗವಿಕಲರಿಗೆ ಆಶ್ರಯ ಮನೆಗಳನ್ನು ಮಂಜೂರು ಮಾಡಬೇಕು. ಚಿಕ್ಕಮಗಳೂರು ನಗರಸಭೆಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಸರ್ವೋದಯ ಅಂಗವಿಕಲರ ಸಂಘದ ಪದಾಧಿಕಾರಿಗಳು ಹಾಗೂ ಇತರೆ ಅಂಗವಿಕಲರು ಪಾಲ್ಗೊಂಡಿದ್ದರು.
--
ಚೆಸ್ಗೆ ಸಮರ್ಪಕ ತರಬೇತಿ ಅಗತ್ಯ
ಶೃಂಗೇರಿ: ಮನುಷ್ಯನ ಬುದ್ಧಿಶಕ್ತಿ ಚುರುಕುಗೊಳಿಸುವ ಚೆಸ್ಗೆ ಸೂಕ್ತ ತರಬೇತಿ ಅಗತ್ಯವಾಗಿದೆ ಎಂದು ಮಾನಗಾರು ಜ್ಞಾನಭಾರತೀ ಚೆಸ್ ಅಕಾಡೆಮಿ ಅಧ್ಯಕ್ಷ ಸುಂಕುರ್ಡಿ ನಂದಕುಮಾರ್ ತಿಳಿಸಿದರು.
ಅವರು ಪಟ್ಟಣದ ಜ್ಞಾನಭಾರತೀ ವಿದ್ಯಾಕೇಂದ್ರ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಾಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರಿಕೆಟ್, ವಾಲಿಬಾಲ್ ಮೊದಲಾದ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಆದರೆ ಚೆಸ್ಗೆ ಇಂತಹ ಪಂದ್ಯಾವಳಿ ಮೂಲಕ ಮಹತ್ವ ನೀಡುವುದು ಅನಿವಾರ್ಯವಾಗಿದೆ. ಸಮರ್ಪಕ ತರಬೇತಿ ನೀಡುವುದರಿಂದ ಇತರೆ ಕ್ರೀಡೆಗಳಂತೆ ಚೆಸ್ನಲ್ಲಿಯೂ ಉತ್ತಮ ಕ್ರೀಡಾಪಟು ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು. ಸುಬ್ರಾಯ, ನಿತಿನ್ ಪಂಡಿತ್, ಕೆ.ಎಲ್. ಗೋಪಾಲಕೃಷ್ಣ, ಲಕ್ಷ್ಮಣ್ಭಟ್, ಆದಿತ್ಯ ಮೊದಲಾದವರು ಉಪಸ್ಥಿತರಿದ್ದರು. ಪಂದ್ಯಾವಳಿಯಲ್ಲಿ 131 ಕ್ಕೂ ಹೆಚ್ಚಿನ ಕ್ರೀಡಾಪಟುಗಲು ಪಾಲ್ಗೊಂಡಿದ್ದರು. ವಿಜೇತ ತಂಡಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಅನಂತ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

