ಚಿಕ್ಕಮಗಳೂರು

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಸತೀಶ್

Published On :

ನರಸಿಂಹರಾಜಪುರ: ಕ್ರೀಡಾಪಟುಗಳು ಕ್ರೀಡೆಗಳನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಬೇಕು ಎಂದು ಚಲನಚಿತ್ರ ಸಹ ನಿರ್ದೇಶಕ ಆರ್.ಸತೀಶ್ ಆಚಾರ್ ಸಲಹೆ ನೀಡಿದರು. ಅವರು ಸೋಮವಾರ ಕುವೆಂಪು ಕ್ರೀಡಾಂಗಣದಲ್ಲಿ ಎನ್.ಆರ್.ಪುರ ಲೆದರ್ ಬಾಲ್ ಕ್ರಿಕೆಟ್ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಲೀಗ್ ಪಂದ್ಯಾವಳಿ ಆಯ್ಕೆಯ ಮೊದಲ ಸುತ್ತಿನ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ, ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳನ್ನು ಕೆಲವರು ಪ್ರತಿಷ್ಠೆಯಾಗಿ ಸ್ವೀಕರಿಸಿ, ಶತ್ರುವಿನ ರೀತಿಯಲ್ಲಿ ಆಟ ಆಡುತ್ತಾರೆ. ಇದು ಸರಿಯಲ್ಲ ಎಂದರು. ತಾಲೂಕು ಲೆದರ್ ಬಾಲ್ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಸುಕುಮಾರ್, ಕಾರ್ಯದರ್ಶಿ ಗಿರಿರಾಜ್, ತಾ.ಪತ್ರಕರ್ತರ ಸಂಘದ ಅಧ್ಯಕ್ಷ ಪುರುಷೋತ್ತಮ್, ತರಬೇತುದಾರ ವಸಂತ್ ಇದ್ದರು.
30ಕ್ಕೆ ನೃತ್ಯ ಸ್ಪರ್ಧೆ
ಚಿಕ್ಕಮಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಯುವ ಅಭಿವೃದ್ಧಿ ಸಂಘ, ಶ್ರೀದೇವಿ ಯುವಕ ಸಂಘ ಹಾಗೂ ವಿವಿಧ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನ.30 ರಂದು ಹಿರೇಮಗಳೂರಿನ ದಿ. ಜನಾರ್ಧನನಾಯ್ಡು ಸ್ಮಾರಕ ರಂಗಮಂದಿರದಲ್ಲಿ ಸಾಮೂಹಿಕ ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕನ್ನಡ ಚಲನಚಿತ್ರ ಗೀತೆಗಳಿಗೆ ಸಾಮೂಹಿಕ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ. ಮಾಹಿತಿಗಾಗಿ 87224 57822 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಮೋಹನ್‌ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.