ದಲಿತರ ಹಲ್ಲೆ: ಆರೋಪಿಗಳ ಬಂಧಿಸಲು ಆಗ್ರಹ
ಚಿಕ್ಕಮಗಳೂರು: ದಲಿತರ ಮೇಲೆ ಹಲ್ಲೆ ನಡೆಸಿರುವವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ದಸಂಸ ಜಿಲ್ಲಾ ಸಂಚಾಲಕ ಕೆ. ಕುಮಾರ್ ಅವರ ನೇತೃತ್ವದಲ್ಲಿ ನಗರಸಭೆಯಿಂದ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಾತಿ ನಿಂಧನೆ: ಚಿಕ್ಕಮಗಳೂರಿನ ಶಂಕರಪುರದ ನಿವಾಸಿ ಪೌರ ಕಾರ್ಮಿಕ ರಮೇಶ್ ಅವರು ನ.19 ರಂದು ಷರೀಫ್ ಗಲ್ಲಿಯಲ್ಲಿ ಹೋಗುವಾಗ ಡಾ. ಅಂಬೇಡ್ಕರ್ ರಸ್ತೆಯಲ್ಲಿರುವ ಬೆಂಗಳೂರು ಕ್ಯಾಂಟಿನ್ ಬಳಿ ಮುಸ್ಲಿಂ ಯುವಕರು ರಮೇಶ್ ಮೇಲೆ ಹಲ್ಲೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಆತನ ಸ್ನೇಹಿತ ಅರುಣನ ಮೇಲೂ ಸಹ ಹಲ್ಲೆ ನಡೆಸಿ ಜಾತಿ ನಿಂಧನೆ ಮಾಡಿದ್ದಾರೆ.
ಈ ಘಟನೆಯಲ್ಲಿ ರಮೇಶ್ ಹಾಗೂ ಅರುಣನಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿತ್ತು.
ಮಾರಣಾಂತಿಕ ಹಲ್ಲೆ: ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಹಾಗೂ ಅರುಣನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಈವರೆಗೆ ಬಂಧಿಸಿಲ್ಲ. ಇದರ ಬದಲಿಗೆ ರಮೇಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಅಮಾಯಕರ ಮೇಲೆ ದೌರ್ಜನ್ಯ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ದಲಿತರ ದೌರ್ಜನ್ಯ ಕಾಯ್ದೆಯಡಿ ಕೇಸು ದಾಖಲಿಸಬೇಕು.
ರಮೇಶ್ ಹಾಗೂ ಅರುಣನ ಮೇಲೆ ಹಾಕಿರುವ ಕೇಸನ್ನು ವಾಪಸ್ ಪಡೆಯಬೇಕು. ದಲಿತರು ವಾಸ ಮಾಡುತ್ತಿರುವ ಶಂಕರಪುರ, ಪೆನ್ಷನ್ ಮೊಹಲ್ಲಾ ಕಾಲೋನಿಗಳಿಗೆ ರಕ್ಷಣೆ ನೀಡಬೇಕು. ಮೂರು ದಿನಗಳೊಳಗೆ ಬೇಡಿಕೆಗಳು ಈಡೇರಿಸದೆ ಹೋದರೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ನರೇಂದ್ರಕುಮಾರ್, ನಗರ ಸಂಚಾಲಕ ಎನ್. ಶ್ರೀನಿವಾಸ್, ಪೌರ ಸೇವಾ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಣ್ಣಯ್ಯ, ನಗರಸಭೆಯ ಪೌರ ಸೇವಾ ನೌಕರರು ಹಾಗೂ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

