ಚಿಕ್ಕಮಗಳೂರು

ಎಪಿಎಂಸಿ ಉಪಾಧ್ಯಕ್ಷರಾಗಿ ಈರಪ್ಪ

Published On :

ಚಿಕ್ಕಮಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷರಾಗಿ ಆಲ್ದೂರು ಈರಪ್ಪಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿದ್ದ ಯೋಗಾನಂದ್ ರವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಎಪಿಎಂಸಿ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಶಿವೇಗೌಡ ಈ ಅಯ್ಕೆ ಪ್ರಕಟಿಸಿದರು.
ನಂತರ ನಡೆದ ಸಮಾರಂಭದಲ್ಲಿ ಉಪಾಧ್ಯಕ್ಷರಿಗೆ ಅಭಿನಂದಿಸಿ ಮಾತನಾಡಿದ ಅಧ್ಯಕ್ಷ ನಿಂಗೇಗೌಡ, ರೈತರು ಮತ್ತು ವರ್ತಕರ ಏಳಿಗೆಗಾಗಿ ಪಕ್ಷಬೇದ ಮರೆತು ಉಪಾಧ್ಯಕ್ಷರ ಆಯ್ಕೆಗೆ ಸಹಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದರು.
ಎಪಿಎಂಸಿ ಪ್ರಾಂಗಣದಲ್ಲಿ 61 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಲ್ಲಿ ಕಾಂಪೌಂಡ್ ಕಾಮಗಾರಿ ಮುಗಿದಿದ್ದು, 10 ವಾಣಿಜ್ಯ ಮಳಿಗೆ ನಿರ್ಮಾಣ ಕೆಲಸ ಪ್ರಗತಿಯಲ್ಲಿದೆ. ಸ್ವಾಗತ ಕಮಾನು ಮತ್ತಿತರೆ ಕಾಮಗಾರಿಗಳು ಹಂತ ಹಂತವಾಗಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. 2.5 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ದುರಸ್ಥಿ ಕಾರ್ಯ ಮಾಡಿ ರೈತರು ಮತ್ತು ವರ್ತಕರಿಗೆ ಅನುಕೂಲ ಕಲ್ಪಿಸಲಾಗಿದೆ. ಶೇ.1 ರಷ್ಟು ಮಾರುಕಟ್ಟೆ ಶುಲ್ಕವನ್ನು ಪಡೆದು ಈ ಆದಾಯದಲ್ಲಿ ಮಾರುಕಟ್ಟೆ ಅಭಿವೃದ್ಧಿಗೆ ಸಹಕರಿಸುವಂತೆ ವರ್ತಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮನವೊಲಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಅಧ್ಯಕ್ಷ ಬೆಳವಾಡಿ ರವೀಂದ್ರ, ಕೆ.ಪಿ. ವೆಂಕಟೇಶ್, ರಾಜೇಂದ್ರ, ಚಂದ್ರು, ಚಂದ್ರೇಶ್, ಸಹಾಯಕ ನಿರ್ದೇಶಕರಾದ ಶೈಲಜಾ, ಚಂದ್ರಶೇಖರ್, ಜೆಡಿಎಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಮಂಜಪ್ಪ, ಬ್ಲಾಕ್ ಅಧ್ಯಕ್ಷ ರಘು, ಮುಖಂಡರಾದ ಗೋಪಾಲ್, ಪುಟ್ಟೇಗೌಡ, ಪ್ರವೀಣ್, ವಸಂತ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.