ಚಿಕ್ಕಮಗಳೂರು

ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ

Published On :

ಮೂಡಿಗೆರೆ: ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ಇತರೆ ದಿನಾಚರಣೆಯಂತೆ ಸರ್ಕಾರ  ಆಚರಿಸಬೇಕು ಎಂದು ಎಸ್‌ಡಿ.ಪಿ.ಐ ಮೂಡಿಗೆರೆ ಕ್ಷೇತ್ರ ಸಮಿತಿ ಅಧ್ಯಕ್ಷ ಮೊಹಮ್ಮದ್ ರಫೀಕ್ ಒತ್ತಾಯಿಸಿ ದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಟಿಪ್ಪು ಸುಲ್ತಾನ್ ಜನ್ಮಾದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಸರ್ಕಾರ ಗಾಂಧೀ ಜಯಂತಿ ಆಚರಿಸಿದಂತೆ ಬ್ರಿಟೀಷರನ್ನು ದೇಶದಿಂದ ಹೊರಗಟ್ಟುವ ಮೂಲಕ ಉತ್ತಮ ಆಡಳಿತ ನೀಡಿದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಬೇಕಾಗಿದೆ ಎಂದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಪಂ ಸದಸ್ಯ ಮತ್ತು ಜೆಡಿಎಸ್ ಮುಖಂಡ ರಂಜನ್ ಅಜಿತ್ ಕುಮಾರ್, ಲೋಹಿತ್ ಮೆರವಣಿಗೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಬೆಳಗುಳ, ಕೋಮು ಸೌಹಾರ್ದ ವೇದಿಕೆಯ ರಾಜ್ಯ ಸಹ ಕಾರ್ಯದರ್ಶಿ ಗೌಸ್ ಮೊಹಿದ್ದೀನ್, ಪಿಎಫ್‌ಐ ಜಿಲ್ಲಾಧ್ಯಕ್ಷ ಮೊಹಮ್ಮದ್ ಫಾರೂಕ್, ಪ್ರಗತಿಪರ ಚಿಂತಕರ ವೇದಿಕೆಯ ಜಿಲ್ಲಾ ಸಂಚಾಲಕ ಕೃಷ್ಣಮೂತಿ, ಸೈಮನ್ ಫರ್ನಾಂಡಿಸ್, ಸಿಖಂದರ್ ಪಾಷಾ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.