ಚಿಕ್ಕಮಗಳೂರು

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಹಾಗೂ ವ್ಯಕ್ತಿಗೆ 2012-13 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಷರತ್ತುಗಳು: ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ  ಸಲ್ಲಿಸುತ್ತಿರುವ ಸ್ವಯಂ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿರಬೇಕು,
    ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಾಹಣೆಗಾಗಿ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ.
 ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ.
 ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ.
 ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 1ನೇ ಮಹಡಿ, ಜಿಲ್ಲಾ ಪಂಚಾಯಿತಿ ಕಟ್ಟಡ ಚಿಕ್ಕಮಗಳೂರು ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
5 ವರ್ಷಕ್ಕೊಮ್ಮೆ ನೋಂದಣಿಯನ್ನು ನವೀಕರಿಸಿ ಸಾಮೂಹಿಕ ವಿವಾಹಗಳನ್ನು ಏರ್ಪಾಡು ಮಾಡಬೇಕೆಂದು ಸರ್ಕಾರದ ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಸಂಘ ಸಂಸ್ಥೆಗಳು ಜಿಲ್ಲಾ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿ ತಾಲೂಕು ತಹಸೀಲ್ದಾರರಿಂದ ಪೂರ್ವಾನುಮತಿ ಪಡೆದು ಸಾಮೂಹಿಕ ವಿವಾಹ ನಡೆಸಬೇಕು. ನೋಂದಣಿ ಮಾಡಿಸದೇ ಕಾರ್ಯಕ್ರಮ ಏರ್ಪಡಿಸಿದ್ದರೆ ಅಂತಹ ವಿವಾಹಗಳನ್ನು ರದ್ದುಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.