ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಬೇರು ಗಟ್ಟಿಗೊಳಿಸಿ'
ತರೀಕೆರೆ: ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಬೇರನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಜಿ. ಸುಬ್ರಹ್ಮಣ್ಯ ತಿಳಿಸಿದರು.
ಸಮೀಪದ ಗಡಿ ಗಿರಿಯಾಪುರ ಗ್ರಾಮದಲ್ಲಿ ತಾ.ಕಸಾಪ ಮತ್ತು ಶಿವನಿ ಹೋಬಳಿ ಕಸಾಪ ಘಟಕ ವತಿಯಿಂದ ನಡೆದ ರಾಜ್ಯೋತ್ಸವ- ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಾಗತೀಕರಣ, ಆಧುನೀಕರಣ ಪ್ರಭಾವದಿಂದ ಆಂಗ್ಲ ಭಾಷೆಯ ಶಿಕ್ಷಣ ಮತ್ತು ವಿದೇಶಿ ಸಂಸ್ಕೃತಿ ಮೈಗೂಡಿಸಿಕೊಳ್ಳುತ್ತಿರುವ ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಸಂಸ್ಕೃತಿಯ ಬೇರನ್ನು ಗಟ್ಟಿಗೊಳಿಸುವ ಕಾರ್ಯ ನಡೆಯಬೇಕಿದೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಕರಿಯಪ್ಪ ಮಾತನಾಡಿ, ನಮ್ಮ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣ ಅವಶ್ಯಕ. ಅದರಲ್ಲಿಯೂ ಮಾತೃ ಭಾಷೆ ಕನ್ನಡ ಮಾಧ್ಯಮ ಮಕ್ಕಳಲ್ಲಿ ವಿಷಯ ಅರಿಯುವ, ಮನನ
ಮಾಡಿಕೊಳ್ಳುವ, ಆವಲೋಕಿಸುವ ಚಿಂತಿಸುವ ಹಾಗೂ ಅಭಿಪ್ರಾಯ ವ್ಯಕ್ತಪಡಿಸುವ ದಿಕ್ಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಶಾರದಮ್ಮ ಮಾತನಾಡಿ, ಭಾಷೆ ಸಂಸ್ಕೃತಿಯ ಸಂಕೇತ. ಕನ್ನಡ ಅಳಿದರೆ ನಮ್ಮ ಸಂಸ್ಕೃತಿ- ಸಂಸ್ಕಾರ ನಶಿಸುತ್ತದೆ ಎಂದರು. ಶಿವನಿ ಹೋಬಳಿ ಕಸಾಪ ಅಧ್ಯಕ್ಷ ರವಿ, ಸಂಚಾಲಕ ಮಂಜುನಾಥ್, ಚಂದ್ರಮ್ಮ, ಬನಶ್ರೀ ಮಹಿಳಾ ಸಂಘದ ಅಧ್ಯಕ್ಷೆ ಯಶೋದಮ್ಮ, ಶಿಕ್ಷಕಿ ಯಶೋದಮ್ಮ ಮತ್ತಿತರರು ಭಾಗವಹಿಸಿದ್ದರು. ಕನ್ನಡ ಗೀತ ಗಾಯನ ಮತ್ತು ಭಜನೆ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

