ಚಿಕ್ಕಮಗಳೂರು

ವಸತಿ ನಿಲಯಕ್ಕೆ ಡಿಸಿ ಭೇಟಿ

Published On :

ಚಿಕ್ಕಮಗಳೂರು: ಕಡೂರು ತಾಲೂಕಿನ ಕಾಮನಕೆರೆ ಮೊರಾರ್ಜಿ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರು ಬುಧವಾರ ಸಂಜೆ ದಿಢೀರ್ ಭೇಟಿ ನೀಡಿ ಅಲ್ಲಿಯ ಸೌಲಭ್ಯ ಕುರಿತು ಪರಿಶೀಲನೆ ನಡೆಸಿದರು. ವಸತಿ ನಿಲಯದ ಅಡಿಗೆ, ಸ್ನಾನದ ಕೋಣೆ ಸೇರಿದಂತೆ ಶೌಚಾಲಯಗಳ ಸ್ವಚ್ಛತೆ ಕುರಿತು ಪರಿಶೀಲಿಸಿದ ಅವರು ಶೌಚಾಲಯ ಶುಸುಚಿಯಾಗಿ ಇಟ್ಟುಕೊಳ್ಳುವಂತೆ ತಿಳಿಸಿದ ಅವರು, ಮಕ್ಕಳ ಓದಿಗೆ ಬೆಳಕಿನ ಅಭಾವ ಇದ್ದು, ವಿದ್ಯುತ್ ಸಂಪರ್ಕ ದುರಸ್ಥಿಪಡಿಸಬೇಕು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸಿಕೊಡುವಂತೆ ವಸತಿ ನಿಲಯದ ಮೇಲ್ವಿಚಾರಕರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿಗಳು ಶಿಕ್ಷಣದ ಬಗ್ಗೆ ವಿಚಾರಿಸಿದರು. ಜೊತೆಗೆ ಉತ್ತಮವಾಗಿ ಅಭ್ಯಾಸ ಮಾಡುವಂತೆ ಅವರಿಗೆ ಸೂಚನೆ ನೀಡಿದರು. ವಸತಿ ನಿಲಯದ ಪೈಟಿಂಗ್ ಸೇರಿದಂತೆ ಉಳಿದ ಇತರ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಡಿ.1 ರಂದು ಮಕ್ಕಳ ಪುಸ್ತಕ ಸಮ್ಮೇಳನ
ಶೃಂಗೇರಿ: ಪಟ್ಟಣದ ಮಾನಗಾರು ಜ್ಞಾನಭಾರತೀ ವಿದ್ಯಾ ಕೇಂದ್ರದ ಆವರಣದಲ್ಲಿ ಜ್ಞಾನಭಾರತೀ ವಿಶ್ವಸ್ಥ ಮಂಡಳಿ ಹಾಗೂ ವಿದ್ಯಾ ಕೇಂದ್ರದ ಆಶ್ರಯದಲ್ಲಿ ಮಕ್ಕಳ ಪುಸ್ತಕ ಸಮ್ಮೇಳನ ಆಯೋಜಿಸಲಾಗಿದೆ.ರಂಗಕರ್ಮಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಬಿ.ಎಲ್.ರವಿಕುಮಾರ್ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ.
 ಡಿ.1 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನ ಕುಮಾರ್ ಜೋತಿ ಬೆಳಗಿಸುವುದರ ಮೂಲಕ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಎಂ.ಎಲ್.ಲಕ್ಷ್ಮಿನಾರಾಯಣ ಭಟ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಲಯಾರಣ್ಯಾಧಿಕಾರಿ ಮೋಹನ್ ಬಿದರಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ಗಾರೆ. ಸಮ್ಮೇಳನದಲ್ಲಿ ಮಕ್ಕಳ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಆಯೋಜಿಸಲಾಗಿದೆ.
ದೀಪೋತ್ಸವ
ಶೃಂಗೇರಿ: ಶ್ರೀ ಶಾರಾದಾ ಪೀಠದ ರಕ್ಷಣಾ ದೇವತೆಗಳಲ್ಲಿ ಪ್ರಮುಖವಾಗಿರುವ ಪಟ್ಟಣದ ಕಾಳಿಕಾಂಬಾ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ದೀಪೋತ್ಸವದ ಅಂಗವಾಗಿ ಅಮ್ಮನವರಿಗೆ ಬೆಳಿಗ್ಗೆಯಿಂದಲೇ ಪಂಚಾಮೃತಾಭಿಷೇಕ ಸೇರಿದಂತೆ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ರಾತ್ರಿ ಭಜನೆ, ಮಹಾ ಮಂಗಳಾರತಿ, ದೀಪೋತ್ಸವ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.