ಚಿಕ್ಕಮಗಳೂರು

'ವಿದ್ಯಾರ್ಥಿಗಳಿಗೆ ಉತ್ತಮ ಮೌಲ್ಯ ಕಲಿಸಿರಿ'

Published On :

ನರಸಿಂಹರಾಜಪುರ: ಶಿಕ್ಷಣ ಪರಿಪೂರ್ಣವಾಗಬೇಕಾದರೆ ವಿದ್ಯಾರ್ಥಿಗಳಿಗೆ ನೈತಿಕತೆ ಮತ್ತು ಜೀವನದ ಉತ್ತಮ ಮೌಲ್ಯಗಳನ್ನು ಕಲಿಸಬೇಕಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಹಾಗೂ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಟಿ.ರಾಜೇಂದ್ರ ಸಲಹೆ ನೀಡಿದರು.
 ಅವರು ಬುಧವಾರ ಶಾರದಾ ವಿದ್ಯಾಮಂದಿರದ ಆವರಣದಲ್ಲಿ ಬೆಂಗಳೂರಿನ ಸಪ್ತಮಿ ಟ್ರಸ್ಟ್ ಹಾಗೂ ಡಿ.ಸಿ.ಎಂ.ಸಿ.ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕೆ.ಸಿ.ಪುಟ್ಟಸ್ವಾಮಿ ಸ್ಮರಣಾರ್ಥ ತಾಲೂಕು ಮಟ್ಟದ ಅಂತರ ಪ್ರೌಢ ಶಾಲೆಗಳ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಶಿಕ್ಷಕರು, ಪೋಷಕರು ಗುರುತಿಸಿ ಅದನ್ನು ಹೊರ ತೆಗೆಯಬೇಕು ಎಂದು ಸಲಹೆ ನೀಡಿದರು.
ಸಮಾರೋಪ: ತಾಲೂಕು ಒಕ್ಕಲಿಗರ ಸಂಘದ ಅದ್ಯಕ್ಷ ಕೆ.ಎಂ.ಗಂಗಾಧರ್ ಉದ್ಘಾಟಿಸಿ ಮಾತನಾಡಿದರು. ಮುತ್ತಿನಕೊಪ್ಪ ಪ್ರಗತಿ ಪರ ಕೃಷಿಕ ಹಾಗೂ ದಂತ ವೈದ್ಯ ಡಾ.ಕೆ.ಪಿ.ಅಂಶುಮಂತ್ ಸಮಾರೋಪ ಭಾಷಣ ಮಾಡಿದರು.  
 ಸಮಾರಂಭದ ಅಧ್ಯಕ್ಷತೆಯನ್ನು  ತಾಲೂಕು ಒಕ್ಕಲಿಗರ ಉಪಾಧ್ಯಕ್ಷ ಸತೀಶ್ವ್‌ಹಿಸಿದ್ದರು. ಅತಿಥಿಗಳಾಗಿ ಭದ್ರಾ ಸೌಹಾರ್ದ ಕೋ ಆಪರೀಟೀವ್ ಸಂಘದ ಅಧ್ಯಕ್ಷ ಡಿ.ಸಿ.ದಿವಾಕರ ಮತ್ತಿತರರು ಇದ್ದರು.
 ಗಾಯನ ಸ್ಪರ್ಧೆಯಲ್ಲಿ ಜ್ವಾಲಾಮಾಲಿನಿ ಬಾಲಿಕಾ ಪ್ರೌಢ ಶಾಲೆಯು ಸಮಗ್ರ ಪ್ರಶಸ್ತಿ ಪಡೆಯಿತು.ಜೀವನ ಜ್ಯೋತಿ ಪ್ರೌಢ ಶಾಲೆಯು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆಯಿತು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.