ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗಳ ಬಂಧನಕ್ಕೆ ಆಗ್ರಹ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು, ನ.27
ಭದ್ರಾವತಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಆರೋಪಿ ಹಾಗೂ ಆತನ ಪೋಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಕಾರ್ತಿಕ್, ಆತನ ತಂದೆ ಹಾಗೂ ಪತ್ನಿ ಮತ್ತು ಬಾಲಕಿಯ ಗರ್ಭಪಾತ ಮಾಡಿಸಿದ ವೈದ್ಯಾಧಿಕಾರಿಗಳು ಹಾಗೂ ಈ ಪ್ರಕರಣದ ವಿಚಾರಣೆ ದಾರಿ ತಪ್ಪಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಜೀವ ಬೆದರಿಕೆ: ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿ ಪಾರ್ವತಿಯನ್ನು ಜೀತದಾಳಿನಂತೆ ಆರು ವರ್ಷಗಳ ಕಾಲ ಮನೆಯಲ್ಲಿ ದುಡಿಸಿಕೊಂಡಿದ್ದಾರೆ. ಕೆಲಸಕ್ಕೆ ಇದ್ದ ಈ ಬಾಲಕಿಯ ಮೇಲೆ ಮನೆಯ ಮಾಲೀಕರ ಮಗ ಕಾರ್ತಿಕ್ ಎಂಬವರು ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿರುವ ವಿಚಾರ ಮನೆಯವರ ಗಮನಕ್ಕೆ ಬಂದಾಗ ಈ ವಿಚಾರ ಯಾರಿಗೂ ತಿಳಿಸಬಾರದೆಂದು ಬಾಲಕಿಗೆ ಆರೋಪಿ ತಂದೆ ಹಾಗೂ ಆತನ ಪತ್ನಿ ಅವರು ಜೀವ ಬೆದರಿಕೆ ಹಾಕಿದ್ದಾರೆ. ಹೀಗಿದ್ದರೂ ಬಾಲಕಿ ನ್ಯಾಯಾಲಯಕ್ಕೆ ದೂರು ನೀಡಿದ್ದು, ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಭದ್ರಾವತಿಯ ಸಿಪಿಐ ಹಾಗೂ ಸಬ್ ಇನ್ಸ್ಪೆಕ್ಟರ್ಗಳು ಬಾಲಕಿಯ ಪೋಷಕರಿಗೆ ಯಾವುದೇ ಮಾಹಿತಿ ನೀಡದೆ ಆರೋಪಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹೇಳಿಕೆ ಬರೆಸಿಕೊಂಡು ಸಾಂತ್ವನ ಕೇಂದ್ರದಲ್ಲಿ ಬಂಧನದಲ್ಲಿಟ್ಟಿದ್ದಾರೆ.
ಆರೋಪಿಗಳಿಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಅತ್ಯಾಚಾರಕ್ಕೊಳಗಾದ ಬಾಲಕಿಗೆ 5 ಲಕ್ಷ ಪರಿಹಾರ ನೀಡಬೇಕು. ಹಾಗೂ ಈ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಬಿ. ಧರ್ಮೇಶ್, ಮೀನಾಕ್ಷಿ, ಶೂದ್ರ ಶ್ರೀನಿವಾಸ್, ಸಗನಪ್ಪ, ಚೌಡಪ್ಪ ಹಾಗೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

