ಚಿಕ್ಕಮಗಳೂರು

ಸ್ವ ಉದ್ಯೋಗ ತರಬೇತಿ ಸಂಸ್ಥೆಗೆ ರಾಷ್ಟ್ರ ಪ್ರಶಸ್ತಿ

Published On :

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಸಮೀಪದಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಕಾಬ್‌ಸೆಟ್ ಸಂಸ್ಥೆ 2012-13 ರ ಸಾಲಿನ ಸಾಧನೆಗಾಗಿ ಭಾರತ ಸರ್ಕಾರ, ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಮೆಚ್ಚುಗೆಗೆ ಪಾತ್ರವಾಗಿದ್ದು, ಎರಡನೆಯ ಬಾರಿಗೆ ಅತ್ಯುತ್ತಮ ಸ್ವ ಉದ್ಯೋಗ ತರಬೇತಿ ಸಂಸ್ಥೆ ಪ್ರಶಸ್ತಿಗೆ ಪಾತ್ರವಾಗಿದೆ. ನ.21 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತ್ಯುತ್ತಮ ಸ್ವ ಉದ್ಯೋಗ ತರಬೇತಿ ಸಂಸ್ಥೆ ಪ್ರಶಸ್ತಿಯನ್ನು ಕಾರ್ಪೋರೇಷನ್ ಬ್ಯಾಂಕ್ ಮುಖ್ಯ ಕಚೇರಿಯ ಆದ್ಯತಾ ರಂಗ ವಿಭಾಗದ ಮಹಾ ಪ್ರಬಂಧಕರಾದ ಲಕ್ಷ್ಮೀನಾಥ ರೆಡ್ಡಿ ಮತ್ತು ಕಾರ್ಪೋರೇಷನ್ ಬ್ಯಾಂಕ್ ಸ್ವ ಉದ್ಯೋಗ ತರಬೇತಿ, ಚಿಕ್ಕಮಗಳೂರು ಸಂಸ್ಥೆಯ ನಿರ್ದೇಶಕ ಕೆ.ಎಸ್. ಸತ್ಯೇಶ ಅವರು ಸ್ವೀಕರಿಸಿದರು.
ತರಬೇತಿ ಕಾರ್ಯಕ್ರಮ
ಚಿಕ್ಕಮಗಳೂರು: ಅನುಸೂಚಿತ ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಮಾನ್ಯ ಮಾಡುವ ಅರಣ್ಯ ಹಕ್ಕು ಯೋಜನೆ ಅನುಷ್ಠಾನ ಹಾಗೂ ಸಮುದಾಯದ ಹಕ್ಕು ಮಾನ್ಯ ಮಾಡುವ ಕುರಿತು ನ.29 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ಹಮ್ಮಿಕೊಳ್ಳಲಾಗಿದೆ. ಎಂದು ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.