ಚಿಕ್ಕಮಗಳೂರು

ಗಿರೀಶ್‌ಗೆ ಸಹಕಾರಿ ಪ್ರಶಸ್ತಿ ಪ್ರದಾನ

Published On :

ಬೀರೂರು: ರಾಜ್ಯ ಸಹಕಾರಿ ವಸತಿ ಮಂಡಳಿಯಿಂದ ಪ್ರತಿ ವರ್ಷ ಕೊಡಮಾಡುವ ಉತ್ತಮ ಸಹಕಾರಿ ಪ್ರಶಸ್ತಿಗೆ ಪಟ್ಟಣದ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹಾಗೂ ಪುರಸಭಾ ಮಾಜಿ ಸದಸ್ಯ ಎಂ.ವಿ. ಗಿರೀಶ್ ಆಯ್ಕೆಗೊಂಡಿದ್ದು, ಬೆಂಗಳೂರಿನಲ್ಲಿ ನಡೆದ 60ನೇ ಸಹಕಾರಿ ಸಪ್ತಾಹ ಸಂದರ್ಭದಲ್ಲಿ ಗಿರೀಶ್ ಅವರ ಸೇವೆ ಗುರುತಿಸಿ ಪ್ರಶಸ್ತಿ ಪತ್ರ ಫಲಕದೊಂದಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್, ಸಹಕಾರ ಸಚಿವ ಮಹದೇವಪ್ರಸಾದ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯ ಗೃಹ ನಿರ್ಮಾಣ ಸಂಘದ ಪ್ರಗತಿಗೆ ಶ್ರಮಿಸುವುದರ ಜೊತೆ ಸಾಲ ಸೌಲಭ್ಯ ವಸೂಲಾತಿಯಲ್ಲೂ ಪ್ರಗತಿ ಸಾಧಿಸಿ ಸಹಕಾರಿ ಪ್ರಗತಿಗೆ ನೀಡುತ್ತಿರುವ ಅನನ್ಯ ಸೇವೆ ಗುರುತಿಸಿ ತಮಗೆ ಈ ಪ್ರಶಸ್ತಿ ನೀಡಲಾಗಿದೆ.
ನೂತನ ಸದಸ್ಯರ ಸೇರ್ಪಡೆ ಮತ್ತು ಸಹಕಾರ ಚಟುವಟಿಕೆಗಳನ್ನು ಇನ್ನಷ್ಟು ಉತ್ತಮಗೊಳಿಸಲು ಶ್ರಮಿಸುವುದಾಗಿ ಹೇಳಿದ ಗಿರೀಶ್, ಈ ಪ್ರಶಸ್ತಿ ತಮ್ಮ ಜವಬ್ದಾರಿ ಹೆಚ್ಚಿಸಿದ್ದು, ಸೇವೆ ಗುರುತಿಸಿ ಗೌರವಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವಿಕಲಚೇತನರ ದಿನಾಚರಣೆ
ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಪಂ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಡಿ. 3ರಂದು ನಗರದ ಜಿಲ್ಲಾ ಆಟದ ಮೈದಾನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ನಡೆಯಲಿದೆ.
ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಲಿದ್ದು, ಜಿಪಂ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಕ್ರೀಡಾಕೂಟದ ಉದ್ಘಾಟನೆ ಮಾಡಲಿದ್ದಾರೆ.
ಶಾಸಕ ಸಿ.ಟಿ. ರವಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗಡೆ, ಶಾಸಕರಾದ ಡಿ.ಎನ್. ಜೀವರಾಜ್, ಜಿ.ಎಚ್. ಶ್ರೀನಿವಾಸ್, ಬಿ.ಬಿ. ನಿಂಗಯ್ಯ, ವೈಎಸ್‌ವಿ ದತ್ತ, ಮೋಟಮ್ಮ, ಎ.ವಿ. ಗಾಯಿತ್ರಿ ಶಾಂತೇಗೌಡ, ಎಂ. ಶ್ರೀನಿವಾಸ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.