ತಂಬಾಕು ಉತ್ಪನ್ನಗಳ ಬಗ್ಗೆ ಎಚ್ಚರವಿರಲಿ
ಕ.ಪ್ರ.ವಾರ್ತೆ, ಮೂಡಿಗೆರೆ, ನ.30 ಶೋಕಿಗಾಗಿ ಶುರುವಾದ ತಂಬಾಕು ಸೇವನೆ ನಂತರ ಚಟವಾಗಿ ಪರಿಣಮಿಸಿ ಜೀವವನ್ನೇ ಬಲಿ ತೆಗೆದುಕೊಳ್ಳುತ್ತದೆ. ಆದ್ದರಿಂದ ತಂಬಾಕು ಉತ್ಪನ್ನ ವಸ್ತುಗಳ ಬಗ್ಗೆ ಎಚ್ಚರವಿರಲಿ ಎಂದು ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ರಾಜಪ್ಪ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಪಪೂ ಕಾಲೇಜು ಮತ್ತು ಶಾಸಕರ ಮಾದರಿ ಶಾಲೆಯಲ್ಲಿ ಆಯೋಜಿಸಿದ್ದ ತಂಬಾಕು ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಪ್ರಜೆಗಳು, ಓದಿನತ್ತ ಹೆಚ್ಚು ಗಮನ ನೀಡುವುದರೊಂದಿಗೆ, ತಂಬಾಕು ಉತ್ಪನ್ನಗಳ ಬಗ್ಗೆ ಎಚ್ಚರಿಕೆ ವಹಿಸುವುದರೊಂದಿಗೆ ಸಾರ್ವಜನಿಕರಲ್ಲೂ ಅದರ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಆಗ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದರು. ನಾವು ಆರೋಗ್ಯವಾಗಿದ್ದರೆ ಸಮಾಜ ಆರೋಗ್ಯಕರವಾಗಿರುತ್ತದೆ ಎಂಬುವುದನ್ನು ಪ್ರತಿಯೊಬ್ಬರೂ ಆರೋಗ್ಯಕರ ಸಮಾಜಕ್ಕೆ ಪ್ರತಿಯೊಬ್ಬರೂ ಪಣ ತೊಡಬೇಕು. ತಂಬಾಕು ವಿರೋಧಿ ದಿನಾಚರಣೆ ಒಂದು ದಿನಕ್ಕೆ ಮೀಸಲಾಗಿರಿಸದೆ, ತಂಬಾಕಿನಿಂದ ಮುಕ್ತವಾಗಸಲು ಪ್ರಯತ್ನಿಸಬೇಕು ಎಂದರು.
ತಂಬಾಕು ವಿರೋಧಿಸುವಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಜಿಲ್ಲಾ ಉಪ ನಿರ್ದೇಶಕ ರಾಜಪ್ಪ ಪ್ರತಿಜ್ಞಾನ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಬಿಆರ್ಸಿಯ ತಾರನಾಥ್, ಸಿಆರ್ಪಿ ಚಂದ್ರಪ್ಪ, ಅಕ್ಷರ ದಾಸೋಹದ ರುದ್ರಪ್ಪ, ಉರ್ದು ಶಿಕ್ಷಣ ಸಂಯೋಜಕ ಅಮ್ಜದ್ ಆಲಿ, ಕಂದಾಯ ಇಲಾಖೆಯ ಹರೀಶ್, ಪ.ಪೂ. ಕಾಲೇಜು ಪ್ರಾಂಶುಪಾಲ ಉಮೇಶ್ ಸೇರಿದಂತೆ ತಾಲೂಕಿನ ಶಿಕ್ಷಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

