ಭೂ ರಹಿತರಿಗೆ ಭೂಮಿ ನೀಡಲು ಒತ್ತಾಯ
ಚಿಕ್ಕಮಗಳೂರು: ಬಗರ್ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ನೀಡುವಂತೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದ ಕಾರ್ಯಕರ್ತರು ನಡೆಸುತ್ತಿದ್ದ ನಿರಶನ ಶನಿವಾರ ಅಂತ್ಯಗೊಂಡಿತು.
ವಿ. ಬಾಲಸುಬ್ರಹ್ಮಣನ್ ಸಮಿತಿ ವರದಿಯನ್ನು ಅಂಗೀಕರಿಸಿ ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಬಿಎಸ್ಪಿ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸರದಿ ಧರಣಿ ಸತ್ಯಾಗ್ರಹ ಆರಂಭಿಸಿದ್ದರು.
ಇಂದು ಸಹ ಬೆಳಗ್ಗಿನಿಂದ ಸಂಜೆಯವರೆಗೆ ಧರಣಿ ನಡೆಸಿದ ಪ್ರತಿಭಟನಾಕಾರರು, ಸಂಜೆ ವೇಳೆಗೆ ಜಿಲ್ಲಾಡಳಿತಕ್ಕೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿ ನಂತರ ಪ್ರತಿಭಟನೆಯನ್ನು ಕೈಬಿಟ್ಟರು.
ಸಕ್ರಮಗೊಳಿಸಿ: ರಾಜ್ಯ ಸರ್ಕಾರ ವಿ. ಬಾಲಸುಬ್ರಹ್ಮಣನ್ ಅವರ ವರದಿಯನ್ನು ತಕ್ಷಣ ಅಂಗೀಕರಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಜಾತಿಗಳು ಮತ್ತು ಭೂ ರಹಿತ ಬಡವರು ರಾಜ್ಯಾದ್ಯಂತ ಅಕ್ರಮವಾಗಿ ಸಾಗುವಳಿ ಮಾಡಿರುವ ಭೂಮಿಯನ್ನು ಸಕ್ರಮಗೊಳಿಸಿ ಅವರಿಗೆ ಹಕ್ಕುಪತ್ರ ನೀಡಬೇಕು.
ಭೂ ಮಾಲೀಕರು ದೊಡ್ಡ ಬೆಳೆಗಾರರು ರಿಯಲ್ ಎಸ್ಟೇಟ್ ಉದ್ಯಮಿಗಳು ಅಕ್ರಮವಾಗಿ ಕಬಳಿಸಿರುವ ಭೂಮಿಯನ್ನು ತಕ್ಷಣ ವಶಪಡಿಸಿಕೊಂಡು ಅದನ್ನು ಭೂ ರಹಿತ ಬಡ ಕುಟುಂಬಗಳಿಗೆ ಹಂಚಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಬಿಎಸ್ಪಿಯ ಲೋಕಸಭಾ ಕ್ಷೇತ್ರದ ಸಂಯೋಜಕರಾದ ಕೆ.ಟಿ. ರಾಧಾಕೃಷ್ಣ, ಜಿ.ಕೆ. ಬಸವರಾಜ್, ರಾಜ್ಯ ಕಾರ್ಯದರ್ಶಿ ಪಿ. ವೇಲಾಯುದನ್, ಜಿಲ್ಲಾಧ್ಯಕ್ಷ ಜಹೀರ್ ಹುಸೇನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

