ಸಾಂಭಾಜಿ ಪಾಟೀಲ್ ಗಡೀಪಾರಿಗೆ ಒತ್ತಾಯ
ಆಲ್ದೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಎಂಇಎಸ್ ಶಾಸಕ ಸಾಂಬಾಜಿ ಪಾಟೀಲ್ ಅವರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಆಲ್ದೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ವೇದಿಕೆಯ ಹೋಬಳಿ ಅಧ್ಯಕ್ಷ ಇಬ್ರಾಹಿಂ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದ ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಶಾಸಕ ಸಾಂಬಾಜಿ ಪಾಟೀಲ್ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಒತ್ತಾಯಿಸುವುದರ ಜೊತೆಗೆ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಎಂಇಎಸ್ ಶಾಸಕ ಸಾಂಬಾಜಿ ಪಾಟೀಲ್ ಉದ್ದಟತನವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.
ಸಾಂಬಾಜಿ ಪಾಟೀಲ್ ಅವರ ವಿಧಾನಸಭೆ ಸದಸ್ಯತ್ವವನ್ನು ರಾಜ್ಯ ಸರ್ಕಾರ ರದ್ದುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದರ ಜೊತೆಗೆ ಅವರನ್ನು ರಾಜ್ಯದಿಂದ ಗಡಿಪಾಡು ಮಾಡಬೇಕು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಸಾಂಬಾಜಿ ಪಾಟೀಲ್ ಅವರು ಬೆಂಗಳೂರಿಗೆ ಬಂದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅವರಿಗೆ ತಕ್ಕಶಾಸ್ತಿ ಮಾಡಲು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಪಂಚಾಕ್ಷರಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಮನೋಜ್ ಕುಮಾರ್, ಮೂಡಿಗೆರೆ ತಾ. ಉಪಾಧ್ಯಕ್ಷ ಮದನ್ಕುಮಾರ್, ಹೋಬಳಿ ಕಾರ್ಯದರ್ಶಿ ವೆಂಕಟೇಶ್, ಮಹಿಳಾ ಘಟಕದ ಹೋಬಳಿ ಅಧ್ಯಕ್ಷೆ ಸರೋಜಮ್ಮ, ಕಾರ್ಯದರ್ಶಿ ಶೈಲಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

