ಚಿಕ್ಕಮಗಳೂರು

'ಸರ್ಕಾರದ ಸಾಧನೆ ಕಾಂಗ್ರೆಸ್ ಗೆಲವಿಗೆ ಶ್ರೀರಕ್ಷೆ'

Published On :

ಕ.ಪ್ರ.ವಾರ್ತೆ, ಕಡೂರು, ಏ.1 ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಗಳಿಂದ ಕಾಂಗ್ರೆಸ್ ಮುನ್ನಡೆ ಸಾಧಿಸಲಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು  ಗೆಲವು ಸಾಧಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ.ಬಿ. ಮಲ್ಲಿಕಾರ್ಜುನ್ ಹೇಳಿದರು.
ಅವರು ಕಡೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರ ಸಭೆ ನಂತರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಸಾಧನೆ ಹಾಗೂ ಕಳೆದ 1 ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಲಮನ್ನಾ ಸೇರಿದಂತೆ ಹಲವು ಜನಪ್ರಿಯ ಕಾರ್ಯಕ್ರಮ ಜನಸಾಮಾನ್ಯರ ಮನಸನ್ನು ಗೆದ್ದಿದೆ ಎಂದವರು ಹೇಳಿದರು.
ಭಿನ್ನಾಭಿಪ್ರಾಯವಿಲ್ಲ: ರಾಜ್ಯದ ಕಾಂಗ್ರೆಸ್ ಮುಖಂಡರಲ್ಲಿ ಯಾವ ಭಿನ್ನಾಭಿಪ್ರಾಯವಿಲ್ಲದೇ ಯಶಸ್ವಿ ಕಾರ್ಯಕ್ರಮ ನೀಡಿರುವುದರಿಂದ ಜನ ಸಾಮಾನ್ಯರು ಫಲಾನುಭವಿಗಳಾಗಿ ಕಾಂಗ್ರೆಸ್ ಪರವಾಗಿದ್ದಾರೆ. ಆ ಮೂಲಕ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಜನಾನುರಾಗಿಯಾಗಿ ಉತ್ತಮ ಕೆಲಸ ಮಾಡಿರುವುದರಿಂದ ಈ ಬಾರಿ ಗೆಲವು ಸಾಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಸಾಮೂಹಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ ಗೆಲವಿಗೆ ಶ್ರಮಿಸುತ್ತಿದ್ದಾರೆ ಎಂದರು.
ಏ. 2 ರಂದು ಕಡೂರಿಗೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರು ಆಗಮಿಸಲಿರುವ ಸಭೆಗೆ ಕಡೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಬೀರೂರು ಬ್ಲಾಕ್ ಅಧ್ಯಕ್ಷ ಕೆ.ಎಂ. ವಿನಾಯಕ್ ಮಾತನಾಡಿ, ಹಾಸನ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿದ್ದು, ಅವರು ಸೇರಿದಂತೆ ಎಲ್ಲರ ಸಹಕಾರದಿಂದ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವೀಕ್ಷಕ  ಡಾ. ಕುಮಾರಸ್ವಾಮಿ, ಮುಖಂಡ ಕೆ.ಎಂ. ಕೆಂಪರಾಜು, ಮಹೇಶ್ ಒಡೆಯರ್, ಎಚ್.ಎಂ. ಲೋಕೇಶ್, ಎಂ.ಎಚ್. ಚಂದ್ರಪ್ಪ,ಕೆ.ಜಿ. ಶ್ರೀನಿವಾಸಮೂರ್ತಿ, ಮಂಡಿ ಎಕ್ಬಾಲ್, ತಮ್ಮಯ್ಯ, ಚಂದ್ರಮೌಳಿ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.