ಚಿಕ್ಕಮಗಳೂರು

ತೃತೀಯ ರಂಗದ ಕೈಗೆ ಕೇಂದ್ರದ ಅಧಿಕಾರ ಚುಕ್ಕಾಣಿ: ಧನಂಜಯ ಕುಮಾರ್

Published On :

ಮೂಡಿಗೆರೆ:  ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಬಹುಮತ ಪಡೆಯುವುದರೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಜಾತ್ಯತೀತ ಜನತಾದಳದ ಅಭ್ಯರ್ಥಿ ವಿ.ಧನಂಜಯಕುಮಾರ್ ತಿಳಿಸಿದರು.
ತಾಲೂಕಿನ ಬಸ್ಕಲ್ ಗ್ರಾಮದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು. ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ಪಕ್ಷದ ಭ್ರಷ್ಟ ಆಡಳಿತದಿಂದ ಜನರು ಕಂಗೆಟ್ಟು ಹೋಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಮತದಾರರು ನಿರ್ಧರಿಸಿದ್ದಾರೆ ಎಂದರು.
ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಅವಧಿಯಲ್ಲಿ ರಾಜ್ಯಕ್ಕೆ ಹತ್ತುಹಲವು ಯೋಜನೆಗಳನ್ನು ತಂದರು. ಕಡೂರು- ಚಿಕ್ಕಮಗಳೂರು- ಸಕಲೇಶಪುರ ರೈಲು ಮಾರ್ಗ, ಹಾಸನ- ನೆಲಮಂಗಲ ಬೆಂಗಳೂರು ರೈಲು ಮಾರ್ಗಕ್ಕೆ ಸಮ್ಮತಿ ನೀಡಿದರು. ರೈತರ ರಸಗೊಬ್ಬರಕ್ಕೆ ಸಹಾಯಧನ ಸೇರಿದಂತೆ ಕೃಷಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರವಿದ್ದಾಗ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರೊಂದಿಗೆ ಕಾಫಿ ಬೆಳೆಗಾರರ ಸಾಲದ ಬಡ್ಡಿ ಮನ್ನಾ ಸೇರಿದಂತೆ ಹತ್ತುಹಲವು ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾಗಿದೆ.
 ಮಲೆನಾಡು ಭಾಗದಲ್ಲಿ ಒತ್ತುವರಿ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಕಾಡುತ್ತಿವೆ. ಇನಾಂ ಭೂಮಿ ಸಮಸ್ಯೆಗೆ ಸ್ವತಃ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮಿಸಿ ಇನಾಂ ಭೂಮಿ ಉಳಿಸುವಂತೆ ಸರ್ಕಾರಕ್ಕೆ ಒತ್ತಾಯ ಹೇರಿದ್ದಾರೆ. ಅಡಕೆ ಹಳದಿ ರೋಗ, ಕಸ್ತೂರಿ ರಂಗನ್ ವರದಿ ದುಷ್ಪರಿಣಾಮಗಳ ವಿರುದ್ಧ ಜನಪರವಾಗಿ ಕೆಲಸ ಮಾಡುವುದಾಗಿ ಧನಂಜಯಕುಮಾರ್ ಭರವಸೆ ನೀಡಿದರು. ಈ ಚುನಾವಣೆ ಮೂಲಕ ತಮಗೆ ಜನಸೇವೆಗೆ ಒಂದು ಅವಕಾಶ ನೀಡುವಂತೆ ಕೋರಿದರು.
ಕ್ಷೇತ್ರದ ಶಾಸಕ ಬಿ.ಬಿ.ನಿಂಗಯ್ಯ, ಕ್ಷೇತ್ರಾಧ್ಯಕ್ಷ ಗಬ್ಬಳ್ಳಿ ಚಂದ್ರೇಗೌಡ ಸೇರಿದಂತೆ ಊರಿನ ಪ್ರಮುಖರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.