ಧೈರ್ಯವಿದ್ದರೆ 'ಭ್ರಷ್ಟಾಚಾರ ಮುಕ್ತ ಭಾರತ' ಘೋಷಣೆ ಮಾಡಿ
ಚಿಕ್ಕಮಗಳೂರು: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕಾಗಿ ಕರೆ ನೀಡಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಧೈರ್ಯ ಇದ್ದರೆ, ಹಸಿವು ಮತ್ತು ಭ್ರಷ್ಟಚಾರ ಮುಕ್ತ ಭಾರತ ನೀಡುತ್ತೇವೆಂಬ ಘೋಷಣೆ ಮಾಡಲಿ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಸವಾಲು ಹಾಕಿದ್ದಾರೆ.
ಭ್ರಷ್ಟಚಾರ ಮುಕ್ತ ದೇಶ ನೀಡುತ್ತೇವೆಂದು ಹೇಳುವ ಧೈರ್ಯ ಅವರಿಗಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಅವರು ಟೀಕಿಸಿದರು.
ಭ್ರಷ್ಟಾಚಾರದಲ್ಲಿ ಬಿಜೆಪಿ: ಕಳೆದ 5 ವರ್ಷದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿ ಹಲವು ಭ್ರಷ್ಟಚಾರದಲ್ಲಿ ತೊಡಗಿತ್ತು. ಇದರಿಂದಾಗಿ ಕೆಲವರು ಜೈಲಿಗೆ ಹೋಗಿ ಬಂದರು. ಆಂತರಿಕ ಕಲಹದಿಂದಾಗಿ ರೆಸಾರ್ಟ್ ರಾಜಕಾರಣ ನಡೆಯಿತು.
ಪ್ರಜಾಪ್ರಭುತ್ವವನ್ನು ಕೊಲ್ಲುವಂತಹ ಕೃತ್ಯಗಳು ಬಿಜೆಪಿಯಿಂದ ನಡೆಯಿತು. ಇಂತಹ ವ್ಯಕ್ತಿ ಮೋದಿಯವರ ಹಿಂದಿದ್ದಾರೆ ಎಂದು ಆರೋಪಿಸಿದರು.
ಬಣ್ಣದ ಮಾತು: ಒಮ್ಮೆ ಬಿಜೆಪಿ ವಾಜಪೇಯಿ ಮುಖವಾಡ ಹಾಕಿಕೊಂಡು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಇದೀಗ ಮೋದಿ ಮುಖವಾಡ ಧರಿಸಿಕೊಂಡು ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಅವರ ಬಣ್ಣ ಬಣ್ಣದ ಡೈಲಾಗ್ಗಳನ್ನು ನೋಡಿ ಮತ ಹಾಕಬೇಡಿ. ಬಿಜೆಪಿ ಸಿದ್ಧಾಂತ ಇಲ್ಲದ ಪಕ್ಷ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

