ಪ್ರತಿಭೆ ಹೊರತರಲು ಶಿಬಿರ ಸಹಕಾರಿ
ತರೀಕೆರೆ: ಮಕ್ಕಳ ಪ್ರತಿಭೆ ಪ್ರಕಾಶಿಸಲು ಬೇಸಿಗೆ ಶಿಬಿರಗಳು ಉತ್ತಮ ಅವಕಾಶವಾಗಿದೆ ಎಂದು ಪುರಸಭಾ ಮಾಜಿ ಅಧ್ಯಕ್ಷೆ, ಎನ್ಇಪಿಎಸ್ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಹೇಮಲತಾ ರೇವಣ್ಣ ಹೇಳಿದರು.
ಪಟ್ಟಣದ ಪ್ರಕೃತಿಶ್ರೀ ಕಲಾ ಕುಟೀರ ವತಿಯಿಂದ ಬುಧವಾರ ಏರ್ಪಡಿಸಿದ್ದ ಬೇಸಿಗೆ ಶಿಬಿರ ಸಂಭ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ, ಬೇಸಿಗೆ ಶಿಬಿರ ಸಂಭ್ರಮ ಹೆಸರಿಗೆ ತಕ್ಕ ಹಾಗೆ ಮಕ್ಕಳಲ್ಲಿ ಸಂಭ್ರಮವನ್ನು ತಂದುಕೊಡುತ್ತದೆ ಎಂದು ತಿಳಿಸಿದರು.
ವಿಜಯಕುಮಾರ್ ಅವರು ಮಾತನಾಡಿ, ಪ್ರಕೃತಿಶ್ರೀ ಕಲಾ ಕುಟೀರದ ಅಧ್ಯಕ್ಷೆ ಉಮಾ ಪ್ರಕಾಶ್ ಅವರು ಮಕ್ಕಳಲ್ಲಿರುವ ಪ್ರತಿಭೆ ಹೊರತರುವ ಕೆಲಸ ಮಾಡುತ್ತಿದ್ದಾರೆ. ಮಕ್ಕಳಿಗೆ ಪೋಷಕರು ಮನೆಯಲ್ಲಿ ಉತ್ತಮ ಸಂಸ್ಕಾರ ನೀಡಬೇಕು, ಗುರುಗಳ ಜವಾಬ್ದಾರಿ ಗುರುತರವಾಗಿರುತ್ತದೆ ಎಂದರು.
ಕಲಾ ಕುಟೀರದ ಅಧ್ಯಕ್ಷೆ ಉಮಾ ಪ್ರಕಾಶ್ ಮಾತನಾಡಿ, ಮಕ್ಕಳನ್ನು ಕಂಡರೆ ಅಭಿಮಾನ ಪ್ರೀತಿ ಇರಬೇಕು, ನಾಳಿನ ಪ್ರಜೆಗಳಿಗೆ ವರ್ತಮಾನದಲ್ಲೇ ಒಳ್ಳೆಯ ಬುನಾದಿ ಹಾಕಿರಬೇಕು. ಹೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡಿದರೆ ಅದು ಮಸ್ತಕದಲ್ಲಿ ಉಳಿಯುವುದರ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಶಿಬಿರದಲ್ಲಿ ಮಕ್ಕಳಿಂದಲೇ ರಚಿತವಾದ ಸಂತೆ ನಡೆಸಲಾಗುವುದು ಎಂದರು.
ಗಾಯತ್ರಿ, ಮನೋಜ್, ಮಕ್ಕಳು ಶಿಬಿರದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

