ಸಾಂಕ್ರಾಮಿಕ ರೋಗ ತಡೆಗೆ ನೈರ್ಮಲ್ಯಕ್ಕೆ ಒತ್ತು
ಕ.ಪ್ರ.ವಾರ್ತೆ ತರೀಕೆರೆ ಏ. 3
ತಾಲೂಕಿನಲ್ಲಿ ಡೆಂಘೀ, ಮಲೇರಿಯಾ, ಚಿಕನ್ಗುನ್ಯಾ ಇತ್ಯಾದಿ ಯಾವುದೇ ತರಹದ ರೋಗಗಳು ಹರಡದಂತೆ ಯಶಸ್ವಿಯಾಗಿ ನಿಯಂತ್ರಿಸುವ ಹಿನ್ನಲೆಯಲ್ಲಿ ಗುರುವಾರ ಉಪವಿಭಾಗಾಧಿಕಾರಿಯವರ ಕಾರ್ಯಾಲಯದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಉಪವಿಭಾಗಾಧಿಕಾರಿ ಅನುರಾಧ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ಏರ್ಪಡಿಸಲಾಗಿತ್ತು.
ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ ಕಳೆದ ಜನವರಿಯಿಂದ ತಾಲೂಕಿನಲ್ಲಿ ಐದು ಮಲೇರಿಯಾ ಪ್ರಕರಣ, ಮೂರು ಡೆಂಗ್ಯೂ ಪ್ರಕರಣಗಳು ಕಂಡುಬಂದಿದ್ದು ಚಿಕಿತ್ಸೆ ನೀಡಿ ಗುಣ ಪಡಿಸಲಾಗಿದೆ. ಪ್ರಸ್ತುತ, ಸಾಂಕ್ರಾಮಿಕ ರೋಗಗಳಾದ ಡೆಂಘೀ, ಮಲೇರಿಯಾ ವಾಂತಿ ಭೇದಿ ಪ್ರಕರಣಗಳು ಬಾರದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರು.
ನೈರ್ಮಲ್ಯಕ್ಕೆ ಒತ್ತು: ಉಪವಿಭಾಗಾಧಿಕಾರಿ ಅನುರಾಧ ಅವರು ಮಾತನಾಡಿ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ದವಾದ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವಲ್ಲಿ ಮತ್ತು ಚರಂಡಿಗಳಲ್ಲಿ ನೀರು ನಿಲ್ಲದಂತೆ ಹಾಗು ಪರಿಸರ ಸ್ವಚ್ಛತೆ ನೈರ್ಮಲ್ಯದ ಕಡೆಗೆ ಹೆಚ್ಚು ಗಮನ ನೀಡಬೇಕೆಂದು ಸೂಚಿಸಿದ ಅವರು ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಾರ್ವ ಸಮೀಕ್ಷೆ ನೆಡೆಸಲು ಆಶಾ ಕಾರ್ಯಕರ್ತಯರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗೂ ಭೇಟಿ ನೀಡಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಸಾರ್ವಜನಿಕರ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ್, ಡಾ. ಪ್ರಸನ್ನಕುಮಾರ್ ಸಣ್ಣಕ್ಕಿ, ತಾಲೂಕಿನ ಎಲ್ಲಾ ವೈದ್ಯಾದಿಕಾರಿಗಳು, ಪುರಸಭೆ ಆರೋಗ್ಯಾಧಿಕಾರಿ ಮಹೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

