ಸಿದ್ದರಾಮಯ್ಯ ಆತ್ಮವಿಮರ್ಶೆ ಮಾಡಿಕೊಳ್ಳಲಿ: ದತ್ತ
ಕಡೂರು: ದೇವೇಗೌಡರು ಪ್ರಧಾನಿಯಾಗಿದ್ದಾಗ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಹಾಗೂ ಹಣಕಾಸು ಸಚಿವರೂ ಆಗಿದ್ದ ಸಿದ್ದರಾಮಯ್ಯ ಅವರು ತಮ್ಮ ಕೊಡುಗೆ ಏನು ಎಂಬುದನ್ನು ಆತ್ಮ ವಿಮರ್ಶೆ ಮಾಡಿಕೊಳ್ಳಲಿ ಎಂದು ರಾಜ್ಯ ಜೆಡಿಎಸ್ ವಕ್ತಾರ ಹಾಗೂ ಶಾಸಕ ವೈಎಸ್‌ವಿ ದತ್ತ ಆಗ್ರಹಿಸಿದ್ದಾರೆ.
ಕಡೂರು ವಿಧಾನಸಭಾ ಕ್ಷೇತ್ರದ ಸಿಂಗಟಗೆರೆ, ಹನುಮಂತಪುರ, ಎಸ್.ಡಿ. ಕೊಪ್ಪಲು, ಹ್ಯಾರಲಘಟ್ಟ, ಕಲ್ಲೇನಿಂಗನಹಳ್ಳಿ, ಬಸವನಹಳ್ಳಿ ಮತ್ತಿತರ ಕಡೆ ದೇವೇಗೌಡರ ಪರ ಚುನಾವಣಾ ಪ್ರಚಾರ ಮಾಡಿ ಮಾತನಾಡಿ, ದೇವೇಗೌಡರು ಸಂಸದರಾಗಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದರು.
ಈ ಬಾರಿ ಕಾಂಗ್ರೆಸ್ ಸರ್ಕಾರ ಕಡೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಆದರೆ, 3 ಕೋಟಿ ಪ್ರಸ್ತಾವನೆಗೆ ನಯಾ ಪೈಸೆ ಬಿಡುಗಡೆಯಾಗಿಲ್ಲ. ಕಾಂಗ್ರೆಸ್ ಶಾಸಕರಿಗಿರುವಷ್ಟೇ ಅಧಿಕಾರ ಎಲ್ಲ ಶಾಸಕರಿಗೂ ಇದೆ. ಆದ್ದರಿಂದ ಕಡೂರು ಕ್ಷೇತ್ರದ ಜನರ ನೀರಿನ ಬವಣೆ ನೀಗಿಸಲು ತಾವು ಈಗಾಗಲೇ 95 ಹೊಸ ಕೊಳವೆ ಬಾವಿ ಕೊರೆಸಿದ್ದು, ಅದರಲ್ಲಿ 67 ರಲ್ಲಿ ನೀರು ಬಂದಿದ್ದು 23 ವಿಫಲವಾಗಿವೆ. ನನ್ನ ನಾಯಕ ದೇವೇಗೌಡರು ಇರುವುದರಿಂದ ತಮಗೆ ಹಣ ತರುವ ಶಕ್ತಿಯಿರುವುದರಿಂದ ಹೊಸ ಕೊಳವೆ ಬಾವಿ ಕೊರೆಸುತ್ತಿದ್ದೇನೆ ಎಂದರು.
ಪ್ರಾಸ್ತಾವಿಕವಾಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಂ. ಮಹೇಶ್ವರಪ್ಪ ಮಾತನಾಡಿದರು.
ಜೆಡಿಎಸ್ ಮುಖಂಡರಾದ ಪಂಚನಹಳ್ಳಿ ಪಾಪಣ್ಣ, ಎಸ್.ಕೆ. ಮಲ್ಲಿಕಾರ್ಜುನ್, ಬೀರಪ್ಪ, ರಂಗನಾಥ್, ರಾಜಣ್ಣ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

