ಅಡಕೆ ಹಾನಿಕಾರಕ ಎಂದು ಎಲ್ಲೂ ಹೇಳಿಲ್ಲ
ತರೀಕೆರೆ: ಅಡಕೆ ಹಾನಿಕಾರಕ ಎಂದು ಎಲ್ಲೂ ಹೇಳಿಲ್ಲ ಎಂದು ಜತೆಯಲ್ಲೇ ತಂದಿಲ್ಲ ಅಫಿಡವಿಟ್ ಪ್ರತಿ ತೋರಿಸಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಸಂಸದ ಜಯಪ್ರಕಾಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸೋಮವಾರ ಪಟ್ಟಣದಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ, ಎನ್ಡಿಎ ಸರ್ಕಾರ ಇದ್ದಾಗಲೇ ಅಡಕೆ ಬಗ್ಗೆ ನೀಡಿದ ವರದಿ ಸಮಿತಿಯಲ್ಲಿ ಮೂರು ಜನ ಬಿಜೆಪಿ ಮುಖಂಡರೇ ಇದ್ದರು. ಇವರ ಜವಾಬ್ದಾರಿ ಏನಿತ್ತು ಎಂದು ಪ್ರಶ್ನಿಸಿದ ಅವರು, ಸಂಸತ್ತಿನಲ್ಲಿ ತಾವು ಮಾತನಾಡುವುದೇ ಇಲ್ಲ ಎಂದು ಆರೋಪಿಸುವರು ವೆಬ್ಸೈಟ್ ನೋಡಲಿ, ಸಂಸತ್ತಿನಲ್ಲಿ ತಾವು ಎಷ್ಟು ಪ್ರಶ್ನೆಗಳನ್ನು ಕೇಳಿದ್ದೇವೆ ಎಂದು ಗೊತ್ತಾಗುತ್ತದೆ ಎಂದು ಸಮರ್ಥಿಸಿಕೊಂಡರು.
ಶಾಸಕ ಜಿ.ಎಚ್. ಶ್ರೀನಿವಾಸ್, ಮಾಜಿ ಶಾಸಕ ಎಸ್.ಎಂ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಘನಿ ಅನ್ವರ್, ಕೆ.ಆರ್. ದ್ರುವಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಸಮೀವುಲ್ಲಾ ಷರೀಫ್, ದೋರನಾಳು ಪರಮೇಶ್, ಮೋಹನ್ಕುಮಾರ್, ಪುರಸಭಾಧ್ಯಕ್ಷ ಸುನೀಲ್ ದತ್ತ, ಪುರಸಭಾ ಸದಸ್ಯರು, ಎಚ್.ಎನ್. ಮಂಜುನಾಥ್, ಮಹೇಶ್ವರಪ್ಪ, ಬಿ.ಎಸ್.ಆರ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಚಿಕ್ಕಮಗಳೂರಿಗೆ ಕೃಷ್ಣ ನಾಳೆ ಭೇಟಿ
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಏ.9 ಮತ್ತು 10 ರಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಏ.9ರ ಸಂಜೆ 6 ಗಂಟೆಗೆ ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಏ.10ರಂದು ಮೂಡಿಗೆರೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

