ಚಿಕ್ಕಮಗಳೂರು

ವಿಶೇಷ ಪೂಜೆ

Published On :

ಚಿಕ್ಕಮಗಳೂರು: ಶ್ರೀರಾಮನವಮಿಯ ಪ್ರಯುಕ್ತ ಹಿರೇಮಗಳೂರಿನ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ವಿಶೇಷ ಪೂಜೆ ಮತ್ತು ವಿಶೇಷ ಹೂವಿನ ಅಲಂಕಾರ ಏರ್ಪಡಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ಅಭಿಷೇಕ ನಂತರ ಬೆಳಗ್ಗೆ 8 ರಿಂದ ಸಂಜೆಯವರೆಗೆ ರಾಮನವಮಿಯ ವಿಶೇಷ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಿ.ವಿ. ಚೂಡಾನಾಥ ಅಯ್ಯರ್ ತಿಳಿಸಿದ್ದಾರೆ. ರಾಮನವಮಿ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಯವರ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.
ಹೆಲ್ಪ್‌ಲೈನ್ ಕೇಂದ್ರ ಉದ್ಘಾಟನೆ
ಮೂಡಿಗೆರೆ: ಗ್ರಾಮೀಣ ಜನರ ಅನುಕೂಲಕ್ಕಾಗಿ ಮತ್ತು ಸರ್ಕಾರದ ಸವಲತ್ತುಗಳ ಬಗ್ಗೆ ಸರಿಯಾದ ಮಾಹಿತಿ ನೀಡುವ ಉದ್ದೇಶದಿಂದ ಹೆಲ್ಪ್‌ಲೈನ್ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಬಿ.ಬಿ. ನಿಂಗಯ್ಯ ತಿಳಿಸಿದರು. ತಾಲೂಕಿನ ಕೊಟ್ಟಿಗೆಹಾರದ ಕಳಸ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾದ ಹೆಲ್ಪ್‌ಲೈನ್ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಹೆಲ್ಪ್‌ಲೈನ್ ಮಾಲೀಕ ಮಾರ್ಕಲ್ ಸತೀಶ್ ಎಂ.ಪಿ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ರಂಜನ್ ಅಜಿತ್‌ಕುಮಾರ್, ಜಿಲ್ಲಾ ಉಪಾಧ್ಯಕ್ಷ ಉಮಾಪತಿ, ಸಂದೀಪ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಜೆಡಿಎಸ್‌ಗೆ ಆಯ್ಕೆ
ಚಿಕ್ಕಮಗಳೂರು: ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕೆ. ಭರತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಮಂಜಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ
ತರೀಕೆರೆ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಾಲಯದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು.   
ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಪಕ್ಷದ ಚುನಾವಣಾ ಪ್ರಚಾರದ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿದರು.
ಶಾಸಕ  ಶ್ರೀನಿವಾಸ್, ಮಾಜಿ ಶಾಸಕ ಎಸ್.ಎಂ. ನಾಗರಾಜ್, ಜಲ್ಲಾ ಕಾಂಗ್ರೆಸ್ ಸಮಿತಿ ಖಚಾಂಚಿ ಬಿಎಸ್‌ಆರ್ ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾದ ಸಮೀವುಲ್ಲಾ ಷರೀಫ್, ದೋರನಾಳ್ ಪರಮೇಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ಲುಲ್ ಘನಿ ಅನ್ನರ್, ಕೆ.ಆರ್.ದ್ರುವಕುಮಾರ್ ಮತ್ತಿತರರು ಹಾಜರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.