17ರಂದು ಕಡ್ಡಾಯವಾಗಿ ಮತ ಹಾಕಿ
ಕ.ಪ್ರ.ವಾರ್ತೆ ತರೀಕೆರೆ ಏ. 8
ಮತದಾನದ ಮೂಲಕ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ದೇವರಾಜಪ್ಪ ತಿಳಿಸಿದರು.
ತಾಲೂಕು ಸ್ವೀಪ್ ಸಮಿತಿ, ಎಸ್ಜೆಎಂ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ಏರ್ಪಾಡಾಗಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ, ಪ್ರತಿಜ್ಞಾ ವಿಧಿ ಬೋಧನೆ, ಮತದಾರರ ಜಾಗೃತಿ ಜಾಥಾ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಮತ ಹಾಕಿ: ಮತದಾನ ಸಂವಿಧಾನಾತ್ಮಕ ಹಕ್ಕು, ಜಾಗೃತಿ ಮತದಾರರು ಕಡ್ಡಾಯವಾಗಿ ಏ.17 ರಂದು ನೆಡೆಯುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವುದರ ಮೂಲಕ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು ಎಂದು ಅವರು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಗುರುಮೂರ್ತಿ ಅವರು ಮಾತನಾಡಿ, ಆಸೆ ಆಮಿಶಗಳಿಗೆ ಬಲಿಯಾಗದೆ ನಿರ್ಭಿತಿಯಿಂದ ಮತ ಚಲಾಯಿಸಬೇಕು ಎಂದು ತಿಳಿಸಿ ಗುರುತಿನ ಚೀಟಿಯ ಬಗ್ಗೆ ಮಾಹಿತಿ ನೀಡಿದರು.
ಸಂವಾದ: ಕ್ಷೇತ್ರ ಶಿಕ್ಷಣಾಧಿಕಾರಿ ಹರಿಪ್ರಸಾದ್ ಅವರು ಮಾತನಾಡಿ ವಿಶ್ವದ ಬೇರೆ ಬೇರೆ ಪ್ರಜಾಪ್ರಭುತ್ವ ರಾಷ್ಟ್ರಗಳ ಅಭಿವೃದ್ದಿಯ ಬಗ್ಗೆ ಮಾಹಿತಿ ನೀಡಿ ಪ್ರಜಾಪ್ರಭುತ್ವಕ್ಕೂ ಅಭಿವೃದ್ದಿಗೂ ಪೂರಕ ಸಂಬಂದ ಇದೆ ಎಂದು ತಿಳಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಪ್ರಾಚಾರ್ಯ ಪ್ರೊ. ಪಿ.ಲಿಂಗಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ಪ್ರೊ.ಕೆ.ಆರ್.ವೀರೇಶ್, ಪ್ರೊ.ಆರ್.ಬಾಲಕೃಷ್ಣ, ಪ್ರೊ. ಜಿ.ಎನ್.ಬಸವರಾಜಪ್ಪ,. ಪ್ರೊ.ಬಿ.ಆರ್.ಡಮ್ಮಳ್ಳಿ, ಪ್ರೊ.ಎಂ.ಇ.ಭದ್ರಪ್ಪ, ಪ್ರೊ.ಟಿ.ಎನ್.ರಜಪೂತ್, ಲಕ್ಷ್ಮಿ, ಟಿ.ಎಂ.ಶೃತಿ, ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಸ್ವೀಪ್ ಸಮಿತಿಯ ತಾಲೂಕು ನೋಡೆಲ್ ಅಧಿಕಾರಿ ಶ್ರೀಧರ್ ಅವರು ಪ್ರತಿಜ್ಞಾ ವಿಧಿ ಬೋದಿಸಿದರು. ವಿದ್ಯಾರ್ಥಿಗಳಿಂದ ಮತದಾರ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

