ಚಿಕ್ಕಮಗಳೂರು

ದೇಶದ ಅಧೋಗತಿಗೆ ಕಾಂಗ್ರೆಸ್, ಬಿಜೆಪಿ ಕಾರಣ

Published On :

ಶೃಂಗೇರಿ: ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತದಿಂದ ದೇಶದಲ್ಲಿ ಆಡಳಿತ ಯಂತ್ರ ಕುಸಿದು ದೇಶ ಅಧೋಗತಿಯತ್ತ ಸಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಬಿಎಸ್ಪಿ ಅಭ್ಯರ್ಥಿ ಜಾಕೀರ್ ಹುಸೇನ್ ಆರೋಪಿಸಿದರು.
ಪಟ್ಟಣದಲ್ಲಿ ಮತಯಾಚನೆ ನಡೆಸಿ ನಂತರ ಸಂತೆಮಾರುಕಟ್ಟೆ ಬಳಿ ಆಯೋಜಿಸಲಾಗಿದ್ದ ಬಹಿರಂಗ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಿಎಸ್ಪಿ ಬೆಂಬಲಿಸಿ: ಭ್ರಷ್ಟಾಚಾರ, ಹಗರಣಗಳು, ಅಗತ್ಯವಸ್ತುಗಳ ಬೆಲೆಯೇರಿಕೆ, ಜನವಿರೋಧಿ ನೀತಿಗಳಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಹಿಂದುಳಿದ, ದಲಿತ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ. ಇವೆರೆಡು ಪಕ್ಷಗಳು ಬಡವರ,ಧರ್ಮದ ಹೆಸರಿನಲ್ಲಿ ಅಧಿಕಾರ ನಡೆಸುತ್ತಿ. ನಮಗೆ ಇಂತಹ ಸರ್ಕಾರಗಳ ಅಗತ್ಯವಿಲ್ಲ. ಜನರು ಬದಲಾವಣೆ ಬಯಸಿದ್ದಾರೆ. ಈ ಭಾರಿ ಬಿಎಸ್ಪಿಯನ್ನು ಬೆಂಬಲಿಸಬೇಕು ಎಂದರು.
ಬಿಎಸ್ಪಿ ಮುಖಂಡ ಕೆ.ಎಂ.ಗೋಪಾಲ್ ಮಾತನಾಡಿ ಗುಜರಾತ್ ಅಭಿವೃದ್ದಿಯಾಗಿದೆ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಆದರೆ ಗುಜರಾತ್ ಅಭಿವದ್ದಿಯಾಗಿಲ್ಲ. ಅಲ್ಪಸಂಖ್ಯಾತರ ಹತ್ಯಾಕಾಂಡವೇ ನಡೆದು ಹೋಯಿತು.
ಸಿಎಂ ಆಗಲಿಲ್ಲ: ಕರ್ನಾಟಕದಲ್ಲಿ ಕಾಂಗ್ರೆಸ್ ದಲಿತ ವಿರೋಧಿಯಾಗಿದೆ. ಖರ್ಗೆ, ಪರಮೇಶ್ವರ್ ಅಂತಹ ನಾಯಕರಿಗೆ ಅರ್ಹತೆಯಿದ್ದರೂ ಸಿಎಂ ಹುದ್ದೆ ಸಿಗಲಿಲ್ಲ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ವೇಲಾಯುಧನ್, ಆನಂದ್, ಪರಮೇಶ್ವರ್, ಮಂಜಯ್ಯ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.