ಚಿಕ್ಕಮಗಳೂರು

ನರಸಿಂಹರಾಜಪುರದಲ್ಲಿ ಏರುತ್ತಿರುವ ಚುನಾವಣೆ ಕಾವು

Published On :

ನರಸಿಂಹರಾಜಪುರ: ಚುನಾವಣೆ ಕಾವು ಜೋರಾಗಿಯೇ ಏರುತ್ತಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತರು ಮನೆ-ಮನೆ ಪ್ರಚಾರ ಮಾಡುತ್ತಿದ್ದಾರೆ.
ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರ ಸಭೆ ನಡೆದು ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಉತ್ಸಾಹವನ್ನು ತುಂಬಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗಡೆ, ಜೆಡಿಎಸ್ ಅಭ್ಯರ್ಥಿ ಧನಂಜಯ ಕುಮಾರ್ ಅವರು ತಾಲೂಕಿನಲ್ಲಿ ಪ್ರವಾಸ ಮಾಡಿ ಮತ ಯಾಚನೆ ಮಾಡಿದ್ದಾರೆ.
ಶಾಸಕ ಡಿ.ಎನ್. ಜೀವರಾಜ್ ತಾಲೂಕಿನ ಹಲವು ಭಾಗಗಳಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮತ ಯಾಚನೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶನಿವಾರ ಕುದುರೆಗುಂಡಿ ಹಾಗೂ ನರಸಿಂಹರಾಜಪುರ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ರಾಜಕೀಯ ಪಕ್ಷಗಳ ಮುಖಂಡರು ಪ್ರಚಾರ ಸಭೆಯಲ್ಲಿ, ಪತ್ರಿಕಾಗೋಷ್ಠಿಗಳಲ್ಲಿ ಮಲೆನಾಡಿನ ಸಮಸ್ಯೆಗಳಾದ ಒತ್ತುವರಿ ಸಮಸ್ಯೆ, ಅಡಕೆ ಹಳದಿ ಎಲೆ ರೋಗದ ಸಮಸ್ಯೆ, ಹುಲಿ ಯೋಜನೆ ಸಮಸ್ಯೆ, ಕಸ್ತೂರಿ ರಂಗನ್ ವರದಿ ವಿಚಾರ ಪ್ರಸ್ತಾಪ ಮಾಡಿ ಎಲ್ಲಾ ಸಮಸ್ಯೆಗಳಿಗೂ ವಿರೋಧ ಪಕ್ಷಗಳೇ ಕಾರಣವಾಗಿದ್ದು, ಇದಕ್ಕೆ ತಮ್ಮಲ್ಲಿ ಸೂಕ್ತವಾದ ದಾಖಲೆಗಳಿದೆ ಎಂದು ಹೇಳುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.