'ಡಾ.ಕಸ್ತೂರಿ ರಂಗನ್ ವರದಿ ನೆಪದಲ್ಲಿ ಕಾಂಗ್ರೆಸ್ ಬಗ್ಗೆ ಬಿಜೆಪಿ ಅಪಪ್ರಚಾರ'
ಕ.ಪ್ರ.ವಾರ್ತೆ ಟಿ ಶೃಂಗೇರಿ ಟಿ ಏ.9
ಡಾ.ಕಸ್ತೂರಿ ರಂಗನ್ ವರದಿ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಇದರ ರೂವಾರಿ ಬಿಜೆಪಿ ಸರ್ಕಾರವಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರನಕೊಡಿಗೆ ನಟರಾಜ್ ತಿಳಿಸಿದರು.
ಇಲ್ಲಿನ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, 2002 ರಲ್ಲಿ ವಾಜಪೇಯಿ ನೇತೃತ್ವದ ಸರ್ಕಾರ ಈ ವರದಿ ಬಗ್ಗೆ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಕಾಂಗ್ರೆಸ್ ಮೇಲೆ ಈ ಆರೋಪ ಹೊರಿಸಿ ಪಶ್ಚಿಮಘಟ್ಟ ಭಾಗದ ಜನರಲ್ಲಿ ಗೊಂದಲ ಸೃಷ್ಟಿಸಿದೆ. ಈ ಮೂಲಕ ಚುನಾವಣೆ ಲಾಭ ಗಿಟ್ಟಿಸಿಕೊಳ್ಲುತ್ತಿದೆ ಎಂದರು.
ಅಡ್ಡಗಾಲು: ಹುಲಿ ಯೋಜನೆ, ಅರಣ್ಯ ಒತ್ತುವರಿ ಸಮಸ್ಯೆಗಳು ಬಿಜೆಪಿ ಸರ್ಕಾರದ ಕೊಡುಗೆಗಳಾಗಿವೆ. ಅಡಕೆ ಬೆಳೆಗಾರರ ಸಮಸ್ಯೆ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಏನು ಮಾಡಿದರು? ಸದಾನಂದಗೌಡ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಮಸ್ಯೆಗಳನ್ನು ಏಕೆ ಈಡೆರಿಸಿಲ್ಲ. ಈ ಭಾಗದ ಸಂಸದರಾಗಿದ್ದರು. ಈಗ ಬೇರೆ ಕ್ಷೇತ್ರಕ್ಕೆ ಪಲಾಯನ ಮಾಡಿದ್ದಾರೆ. ಶೋಭಾ ಕರಂದ್ಲಾಜೆ ಸಚಿವರಾಗಿದ್ದಾಗ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ಗಾಗ ಮೌನವಾಗಿದ್ದರು. ಬಿಜೆಪಿಯವರು ಈ ಭಾಗದ ಹಳದಿ ಎಲೆರೋಗ ಪೀಡಿತ ರೈತರಿಗೆ ಸಿಗಬಹುದಾಗಿದ್ದ 2 ಸಾವಿರ ಕೋಟಿ ಪರಿಹಾರ ಪ್ರಸ್ತಾವನೆಗೆ ಇನ್ನುಳಿದ ಕೆಲ ಜಿಲ್ಲೆಗಳನ್ನು ಸೇರಿಸಿ 5000 ಕೋಟಿ ಪ್ರಸ್ತಾವನೆ ಸಲ್ಲಿನ ರೈತರಿಗೆ ಅಡ್ಡಗಾಲು ಹಾಕಿದರು.
ಭಾವನೆ ಕೆರಳಿಸುವ ಪ್ರಯತ್ನ: ಜಯಪ್ರಕಾಶ್ ಹೆಗ್ಡೆ ಗೋರಕ್ ಸಿಂಗ್ ವರದಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ರಾಜ್ಯ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಸಣ್ಣ ರೈತರ, ಹಿಂದುಳಿದ ವರ್ಗಗಳ ಸಾಲ ಮನ್ನಾ ಮೊದಲಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಪ್ರನಾಳಿಕೆಯ ಭರವಸೆಗಳನ್ನು ಈಡೇರಿಸುತ್ತಿದೆ. ಬಿಜೆಪಿ ಬಿಡುಗಡೆಗೊಳಿಸಿರುವ ಪ್ರನಾಳಿಕೆಯಲ್ಲಿ ರಾಮಮಂದಿರ ನಿರ್ಮಾಣದ ಜಪಮಾಡಿ ಮತೀಯ ಭಾವನೆ ಕೆರಳಿಸುವ ಪ್ರಯತ್ನ ಮಾಡಿದೆ ಎಂದರು.
ಮನವಿ: ಕಾಂಗ್ರೆಸ್ ಮೊದಲು ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಕಾಂಗ್ರೆಸ್ನಲ್ಲಿ ಅನೇಕ ನಾಯಕರಿದ್ದಾರೆ. ಚುನಾವಣೆ ಪಲಿತಾಂಶ ನಂತರ ಒಮ್ಮತದಿಂದ ಆಯ್ಕೆ ಮಾಡುತ್ತದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ರೈತರ ಸಮಸ್ಯೆಗಳನ್ನು ಈಡೇರಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರ ಮಾಡುತ್ತಿರುವ ಅಪಪ್ರಚಾರಗಳಿಗೆ ಕಿವಿಗೊಡದೇ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷೆ ಸೌಭಾಗ್ಯ ಗೋಪಾಲನ್, ರಾಜೇಶ್, ದಿನೇಶ್ ಶೆಟ್ಟಿ, ರಮೇಶ್ ಭಟ್, ಪೂರ್ಣಿಮಾ ಸಿದ್ದಪ್ಪ, ಉಮೇಶ್ ಪುದುವಾಳ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

